ಕರ್ನಾಟಕದಲ್ಲಿ ಸೋಮವಾರ 7 ಸಾವಿರಕ್ಕಿಂತಲೂ ಕಡಿಮೆಯಾದ ಕೊರೊನಾ ದೈನಂದಿನ ಸೋಂಕು

ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ 2ನೇ ಅಲೆ ಆರ್ಭಟ ಕಡಿಮೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 6835 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದೇ ಸಮಯದಲ್ಲಿ 120 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 27,71,969ಕ್ಕೆ ಏರಿಕೆಯಾಗಿದೆ ಹಅಗೂ ಒಟ್ಟು ಸಾವಿನ ಸಂಖ್ಯೆ 33033ಕ್ಕೆ ಏರಿಕೆಯಾಗಿದೆ.
ರಾಜ್ಯಾದ್ಯಂತ 15,409 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದು, ಈವರೆಗೆ ಒಟ್ಟು 2566774 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ 4.56% ರಷ್ಟಿದೆ.
ಸೋಮವಾರ ಬೆಂಗಳೂರಿನಲ್ಲಿ 1470 ಜನರಿಗೆ ಕೊರೊನಾ ತಗುಲಿದೆ, 23 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಬೆಂಗಳೂರಲ್ಲಿ ಈವರೆಗೆ 11,98,158 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಈವರೆಗೆ ಒಟ್ಟು 15,319 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

14-06-2021 HMB Kannada

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement