ಅಂಬಾನಿ ನಿವಾಸದ ಬಳಿ ಕಾರಿನಲ್ಲಿ ಸ್ಫೋಟಕ ಪತ್ತೆ ಪ್ರಕರಣ: ಮತ್ತಿಬ್ಬರ ಸೆರೆ

ಮುಂಬೈ: ಉದ್ಯಮಿ ಮುಖೇಶ್ ಅಂಬಾನಿ ನಿವಾಸದ ಬಳಿ ಸ್ಫೋಟಕ ತುಂಬಿದ ಎಸ್‌ಯುವಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ‌ ತನಿಖಾ ದಳ (ಎನ್‌ಐಎ) ಕಾರ್ಯಾಚರಣೆ ನಡೆಸಿ, ಇನ್ನಿಬ್ಬರನ್ನು ಬಂಧಿಸಿದೆ.
ಬಂಧಿತರನ್ನು ಸಂತೋಷ್ ಖೆಹರ್ ಮತ್ತು ಆನಂದ್ ಜಾದವ ಎಂದು ಗುರುತಿಸಲಾಗಿದೆ. ಇವರಿಬ್ಬರು ಪ್ರಕರಣದಲ್ಲಿ ಶಾಮೀಲಾಗಿರುವ ಬಗ್ಗೆ ಪ್ರಾಥಮಿಕ ವರದಿಯಿಂದ ಬಹಿರಂಗವಾಗಿದೆ ಎಂದು ಎನ್‌ಐಎ ಹೇಳಿದೆ.
ಈ ಇಬ್ಬರು ಆರೋಪಿಗಳನ್ನು ಜೂ. 11ರಂದು ಬಂಧಿಸಲಾಗಿದೆ . ಇವರಿಬ್ಬರಿಗೆ ಈ ತಿಂಗಳ 21ರ ತನಕ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ಎನ್ ಐಎ‌‌ ಅಧಿಕಾರಿಗಳು ತಿಳಿಸಿದರು.
ಮನ್ಸುಖ್ ಹಿರೆನ್ ಸಾವಿನ ಪ್ರಕರಣದಲ್ಲಿ ಇವರಿಬ್ಬರ ಕೈವಾಡವಿರುವ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದರು.
ಫೆ.25ರಂದು ಸ್ಪೋಟಕಗಳು ತುಂಬಿದ್ದ ವಾಹನ ಅಂಬಾನಿ ನಿವಾಸದ ಬಳಿ ಪತ್ತೆಯಾಗಿದ್ದವು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

4 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ