ದ್ವಿತೀಯ ಪಿಯು ವಿದ್ಯಾರ್ಥಿಗಳ ಫಲಿತಾಂಶಕ್ಕೆ ಹೈಕೋರ್ಟ್ ತಡೆ

posted in: ರಾಜ್ಯ | 0

ಬೆಂಗಳೂರು: ಕೊರೊನಾ ಹೆಚ್ಚಳದ ಕಾರಣಕ್ಕೆ ದ್ವಿತೀಯ ಪಿಯು ಪರೀಕ್ಷೆ ರದ್ದುಗೊಳಿಸಿ, ಎಲ್ಲ ವಿದ್ಯಾರ್ಥಿಗಳನ್ನು ಪಾಸು ಮಾಡಿ ಆದೇಶ ಹೊರಡಿಸಿದ್ದ ಸರ್ಕಾರಕ್ಕೆ ಗುರುವಾರದ ವರೆಗೆ ಫಲಿತಾಂಶ ಪ್ರಕಟಿಸದಂತೆ ಹೈಕೋರ್ಟ್‌ ತಡೆ ನೀಡಿದೆ.

ರಿಪೀಟರ್ಸ್​​ಗೆ ಪರೀಕ್ಷೆ ಇರುತ್ತದೆ ಎಂದು ಹೇಳಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ ಎಂದು ನ್ಯೂಸ್‌18 ಕನ್ನಡ.ಕಾಮ್‌ ವರದಿ ಮಾಡಿದೆ.
ದ್ವಿತೀಯ ಪಿಯು ವಿದ್ಯಾರ್ಥಿಗಳನ್ನು ಪಾಸ್ ಮಾಡಿದ ಬಳಿಕ ರಿಪೀಟರ್ಸ್ಗಳು​​ ತಮಗೆ ಸರ್ಕಾರ ಅನ್ಯಾಯ ಮಾಡಿದೆ, ತಮಗೆ ಮಾತ್ರ ಪರೀಕ್ಷೆ ನಡೆಸಿ ತಾರತಮ್ಯ ಎಸಲಾಗುತ್ತಿದೆ ಎಂದು ಹೇಳಿ ಹೈಕೋರ್ಟ್​ ಮೆಟ್ಟಿಲೇರಿದ್ದರು. ಹೈಕೋರ್ಟ್ ಸರ್ಕಾರದ ನಿರ್ಧಾರಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದು, ಸದ್ಯ ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸದಂತೆ ತಡೆ ನೀಡಿದೆ ಎಂದು ವರದಿ ಹೇಳಿದೆ.
ಗುರುವಾರದ ತನಕ ಪಿಯುಸಿ ಫಲಿತಾಂಶ ಪ್ರಕಟ ಮಾಡದಿರುವಂತೆ ಹೈಕೋರ್ಟ್​ ಸೂಚಿಸಿದೆ. ಈ ವಿಚಾರ ಕುರಿತು ಸರ್ಕಾರದ ಅಡ್ವೋಕೇಟ್ ಜನರಲ್​​ಗೆ ಗುರುವಾರದೊಳಗೆ ಮಾಹಿತಿ ನೀಡುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಸಿಂಗ್ರೇಗೌಡ ಎಂಬವರು ರಿಪೀಟರ್ಸ್​​ ಪರವಾಗಿ ಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು.
ಕೊರೊನಾ ಹೆಚ್ಚಳದಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ದ್ವಿತೀಯ ಪಿಯು ಪರೀಕ್ಷೆ ರದ್ದುಗೊಳಿಸಿತ್ತು. ಎಸ್​ಎಸ್​ಎಲ್​ಸಿ ಹಾಗೂ ಪ್ರಥಮ ಪಿಯುಸಿ ಅಂಕಗಳ ಆಧಾರದ ಮೇಲೆ ಗ್ರೇಡಿಂಗ್ ಮಾದರಿಯಲ್ಲಿ ಫಲಿತಾಂಶ ನೀಡುವುದಾಗಿ ಹೇಳಿತ್ತು. ಇದಾದ ಕೆಲವು ದಿನಗಳ ಬಳಿಕ ರಿಪೀಟರ್ಸ್​ಗೆ ಪರೀಕ್ಷೆ ಇರುತ್ತದೆ ಎಂದು ಹೇಳಿತ್ತು. ಹೀಗಾಗಿ ರಿಪೀಟರ್ಸ್​ಗಳು ಹೈಕೋರ್ಟ್​ ಮೊರೆ ಹೋಗಿದ್ದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

3.7 / 5. ಒಟ್ಟು ವೋಟುಗಳು 3

ನಿಮ್ಮ ಕಾಮೆಂಟ್ ಬರೆಯಿರಿ