ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸಚಿವ ಸಭೆ ಕರೆದಿದ್ದಕ್ಕೆ ವಿಶ್ಲೇಷಣೆ ಅಗತ್ಯವಿಲ್ಲ 

posted in: ರಾಜ್ಯ | 0

ಬೆಂಗಳೂರು : ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಸಚಿವರ ಸಭೆ ಕರೆದಿರುವುದಕ್ಕೆ ಬೇರೆ ಯಾವುದೇ ತರದ ವಿಶ್ಲೇಷಣೆ ಮಾಡುವ ಅಗತ್ಯವಿಲ್ಲ ಎಂದು ಗೃಹ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು
ಮಂಗಳವಾರ ಬೆಂಗಳೂರಿನ ತಮ್ಮ ನಿವಾಸದ ಬಳಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಅರುಣ ಸಿಂಗ್‌ ಅವರು ಬಿಜೆಪಿಯ ಕರ್ನಾಟಕದ ಉಸ್ತುವಾರಿಯಾಗಿದ್ದು, ಹಿಗಾಗಿಯೇ ಅವರು ಬರುತ್ತಾರೆ. ಹೀಗಅಗಿ ಅವರು ಕರೆದಿರುವ ಸಭೆಗೆ ವಿಶೇಷ ಅರ್ಥಕ್ಲಪಿಸಬೇಕಿಲ್ಲ ಎಂದು ಸಚಿವ ಬೊಮ್ಮಾಯಿ ಹೇಳಿದರು.
ಜೆಡಿಎಸ್ ಪಕ್ಷದ ಎಚ್. ಡಿ. ರೇವಣ್ಣ ಅವರು ಆವಾಗವಾಗ ತಮ್ಮನ್ನು ಭೇಟಿ ಮಾಡಲು ಬರುತ್ತಾರೆ. ಅವರ ಜಿಲ್ಲೆ ಹಾಗೂ ಕ್ಷೇತ್ರದ ಹಲವಾರು ವಿಚಾರವಾಗಿ ಚರ್ಚೆ ಮಾಡಲು ಬರುತ್ತಾರೆ ಎಂದು ಅವರು ಹೇಳಿದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ