ಖಾಸಗಿ ಶಾಲೆಗಳ ಬೋಧನಾ ಶುಲ್ಕ ನಿಗದಿಗೆ ಸಮಿತಿ ರಚನೆ ಪ್ರಸ್ತಾಪ

ಬೆಂಗಳೂರು: ಖಾಸಗಿ ಶಾಲೆಗಳ ಬೋಧನಾ ಶುಲ್ಕ ವಿಚಾರವಾಗಿ ರಾಜ್ಯ ಸರ್ಕಾರ ಹೈಕೋರ್ಟ್​ಗೆ ಮಧ್ಯಂತರ ಅರ್ಜಿ ಸಲ್ಲಿಸಿದೆ. ರಾಜ್ಯದ ಅಡ್ವೋಕೇಟ್ ಜನರಲ್ ಪ್ರಭುಲಿಂಗ್ ನಾವದಗಿ ಈ ಬಗ್ಗೆ ಮಂಗಳವಾರ (ಜೂನ್ 15) ಹೇಳಿಕೆ ನೀಡಿದ್ದಾರೆ. ಖಾಸಗಿ ಶಾಲೆಗಳಲ್ಲಿನ ಶುಲ್ಕ ನಿಗದಿ ಬಗ್ಗೆ ಸಮಿತಿ ರಚನೆ ಮಾಡುವಂತೆ ಪ್ರಸ್ತಾಪ ಮಾಡಲಾಗಿದೆ. ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳ ಸಮಿತಿ ರಚನೆ ಮಾಡಬೇಕು. ಬಳಿಕ, ಸಮಿತಿ ಸೂಚನೆಯಂತೆ ಶುಲ್ಕ ನಿಗದಿ ಮಾಡಲು ಪರಿಶೀಲನೆ ನಡೆಸಬೇಕು ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಈ ಬಗ್ಗೆ ಜೂನ್ 21ಕ್ಕೆ ಹೈಕೋರ್ಟ್ ವಿಚಾರಣೆ ನಿಗದಿಪಡಿಸಿದೆ.
ಕೋವಿಡ್‌ ಸಮಯದಲ್ಲಿ ಶೇಕಡಾ 30ರಷ್ಟು ಶುಲ್ಕ ರಿಯಾಯಿತಿ ನೀಡಿ ಶೇಕಡಾ 70ರಷ್ಟು ಶುಲ್ಕ ಪಡೆಯುವಂತೆ ಸರ್ಕಾರ ಆದೇಶಿಸಿತ್ತು. ಕೊವಿಡ್​ನಿಂದ ಪೂರ್ಣ ಶುಲ್ಕ ಭರಿಸಲು ಪೋಷಕರಿಗೆ ಕಷ್ಟವಾಗಬಹುದು. ಕೊರೊನಾ ಹಾಗೂ ಲಾಕ್​ಡೌನ್​ನಿಂದ ಜನಸಾಮಾನ್ಯರ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಹೀಗಾಗಿ ಶುಲ್ಕದ ವಿಚಾರದಲ್ಲಿ ಸರ್ಕಾರ ಆದೇಶ ನೀಡಿತ್ತು. ಆದರೆ, ಇದರ ವಿರುದ್ಧ ಖಾಸಗಿ ಶಾಲೆಗಳ ಒಕ್ಕೂಟ ರಿಟ್ ಅರ್ಜಿ ಸಲ್ಲಿಸಿತ್ತು.
ಈಗ ರಾಜ್ಯ ಸರ್ಕಾರ ಹೈಕೋರ್ಟ್​ಗೆ ಮಧ್ಯಂತರ ಅರ್ಜಿ ಸಲ್ಲಿಸಿದೆ. ಈ ಬಗ್ಗೆ ಜೂನ್ 21ಕ್ಕೆ ವಿಚಾರಣೆ ನಡೆಸುವುದಾಗಿ ಹೈಕೋರ್ಟ್ ನಿಗದಿಪಡಿಸಿದೆ.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

 

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement