ಆರೋಗ್ಯ ಇಲಾಖೆ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಸಿಹಿಸುದ್ದಿ : ಕೋವಿಡ್ ಸೋಂಕಿತ-ಸಂಪರ್ಕಿತರಿಗೆ 10 ದಿನ ವೇತನ ಸಹಿತ ರಜೆ

ಬೆಂಗಳೂರು : ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ರಾಜ್ಯ ಸರ್ಕಾರ ಸಿಹಿ ನೀಡಿದೆ. ಗುತ್ತಿಗೆ ಹಾಗೂ ಹೊರ ಗುತ್ತಿಗೆ ಕೋವಿಡ್ ಸೋಂಕಿತರಿಗೆ ಹಾಗೂ ಸೋಂಕಿತರ ಸಂಪರ್ಕಿತರಿಗೆ ಚಿಕಿತ್ಸೆ ಹಾಗೂ ಐಸೊಲೇಶನ್‌ಗೆ 10 ದಿನ ವೇತನ ಸಹಿತ ರಜೆ ನೀಡಿ ಇಲಾಖೆ ಆದೇಶ ಹೊರಡಿಸಿದೆ.
ಈ ಕುರಿತು ರಾಷ್ಟ್ರೀಯ ಆರೋಗ್ಯ ಅಭಿಯಾನ ನಿರ್ದೇಶಕರಾದ ಆರುಂಧತಿ ಆದೇಶ ಹೊರಡಿಸಿದ್ದು, ಆರೋಗ್ಯ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ಸಿಬ್ಬಂದಿ ಕೋವಿಡ್ -19ರ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುವ ಸಮಯದಲ್ಲಿ ಚಿಕಿತ್ಸೆ ಹಾಗೂ ಆರೈಕೆಗಾಗಿ ಅಗತ್ಯ ರಜೆ ಮಂಜೂರು ಮಾಡಲಾಗಿದೆ ಎಂದು ಆದೇಶ ಹೊರಡಿಸಿದ್ದಾರೆ.
ವೈದ್ಯಕೀಯ ಕಾರಣಗಳಿಂದ ಅಥವಾ ಇತರ ಖಾಯಿಲೆಗಳಿಂದ ಬಳಲುತ್ತಿರುವವರು ಚಿಕಿತ್ಸೆಗೆ ರಜೆಯ ಅವಶ್ಯಕತೆ ಇದ್ದಲ್ಲಿ, ಕೋವಿಡ್ ಸೋಂಕು ಧೃಡಪಟ್ಟ ವರದಿ ಆಧರಿಸಿ ಆರೋಗ್ಯ ಸ್ಥಿರತೆಯ ಬಗ್ಗೆ ಚಿಕಿತ್ಸೆ ನೀಡಿದ ವೈದ್ಯರಿಂದ ಧೃಡೀಕರಿಸಿದ ಪ್ರಮಾಣ ಪತ್ರ ಸಲ್ಲಿಸಿದ್ದಲ್ಲಿ ವೇತನ ರಹಿತ ರಜೆ ಮಂಜೂರು ಮಾಡಲು ಅವಕಾಶವಿರುತ್ತದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಕೋವಿಡ್ -19 ಸೋಂಕಿನ ಲಕ್ಷಣಗಳಿಗೆ ಚಿಕಿತ್ಸೆ ಪಡೆಯುತ್ತಿರುವವರು ಹಾಗೂ ವಿಶೇಷ ಪ್ರಕರಣಗಳಲ್ಲಿ ವೇತನ ಸಹಿತ ರಜೆಯ ಅವಧಿಯನ್ನು ಕೋವಿಡ್ -19 ಚಿಕಿತ್ಸೆ ಸಂದರ್ಭಕ್ಕನುಗುಣವಾಗಿ ಧೃಡೀಕರಿಸಿದ ವೈದ್ಯಕೀಯ ದಾಖಲೆ ಸಲ್ಲಿಸಿದ್ದಲ್ಲಿ 10 ದಿನಗಳ ವೇತನ ಸಹಿತ ರಜೆ ವಿಸ್ತರಿಸಬಹುದಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದೆ.

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement