ಬಿಜೆಪಿ ಸರ್ಕಾರ ಫೀಲ್ಡಿನಲ್ಲಿದೆ, ಕಾಂಗ್ರೆಸ್‌ ಆರೋಪ ಮಾಡ್ತಿದೆ, ಜೆಡಿಎಸ್‌ ಕ್ವಾರಂಟೈನ್‌ನಲ್ಲಿದೆ

ಬೆಂಗಳೂರು: ನಾನು ಮೂರು ದಿನಗಳ ರಾಜ್ಯ ಪ್ರವಾಸಕ್ಕೆ ಬಂದಿದ್ದೇನೆ. ಈ ಸಂಧರ್ಭದಲ್ಲಿ ಪಕ್ಷ ಸಂಘಟನೆ, ರಾಜ್ಯದಲ್ಲಿ ಕೊವಿಡ್ ನಿರ್ವಹಣೆ ವಿಚಾರದ ಬಗ್ಗೆ ಚರ್ಚಿಸುತ್ತೇನೆ. ಕೊವಿಡ್ ವಿಚಾರದ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಸಂಪುಟದ ಸಚಿವರ ಜೊತೆ ಚರ್ಚಿಸಲಾಗುತ್ತದೆ ಎಂದು ಬಿಜೆಪಿಯ ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.
ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಗೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರು ದಿನಗಳ ಕಾರ್ಯಕ್ರಮದ ಮೇಲೆ ಬಂದಿದೇನೆ. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಉತ್ತಮವಾಗಿ ಕಾರ್ಯನಿರ್ವಹಣೆ ಮಾಡುತ್ತಿದೆ ಎಂದು ಪುನರುಚ್ಚರಿಸಿದರು.
ಸರ್ಕಾರದ ಕೊರೊನಾ ಸಾಂಕ್ರಾಮಿಕ ನಿರ್ವಹಣೆಯಲ್ಲಿ ಹಗಲು ರಾತ್ರಿ ಕೆಲಸ ಮಾಡುತ್ತಿದೆ. ನಮ್ಮ ಸರ್ಕಾರ ಮೃತರಿಗೆ ಒಂದು ಲಕ್ಷ ರೂ. ಪರಿಹಾರ ಕೊಟ್ಟಿದೆ. ನಾಕತ್ವದ ವಿಚಾರದಲ್ಲಿ ಈಗಾಗಲೇ ಹೇಳಿದ್ದೇನೆ. ಅದನ್ನು ಪದೇ ಪದೇ ಹೇಳುವ ಅಗತ್ಯ ಇಲ್ಲ. ಯಡಿಯೂರಪ್ಪ ನೇತೃತ್ವದಲ್ಲಿ ಒಳ್ಳೆಯ ಕೆಲಸ ನಡೆಯುತ್ತಿದೆ ಎಂದು ಅರುಣ್ ಸಿಂಗ್ ಹೇಳಿದರು.
ಕೋವಿಡ್ ವಿಚಾರದಲ್ಲಿ ವಿಪಕ್ಷ ಕಾಂಗ್ರೆಸ್‌ನಿಂದ ಟೀಕೆಯಷ್ಟೇ ಕೇಳಿಬರುತ್ತಿದೆ. ಕಾಂಗ್ರೆಸ್ ಕೇವಲ ಆರೋಪ ಮಾಡುವ ಕೆಲಸ ಮಾಡುತ್ತಿದೆ. ಯಡಿಯೂರಪ್ಪ ಸರ್ಕಾರ ಕೆಲಸ ಮಾಡುತ್ತಿದೆ. ಜೆಡಿಎಸ್ ಕ್ವಾರಂಟೈನ್ ನಲ್ಲಿದೆ ಎಂದು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯದಲ್ಲಿನ ಹಾಲಿ ಪರಿಸ್ಥಿತಿ ಬಗ್ಗೆ ವ್ಯಾಖ್ಯಾನ ನೀಡಿದರು.
ವಲಸಿಗ ಸಚಿವರ ಪ್ರತ್ಯೇಕ ಸಭೆ..:
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಅವರ ಸಂಪುಟದ ಸಚಿವರ ಜೊತೆ ಅರುಣ್​ ಸಿಂಗ್ ಇಂದು (ಬೂಧವಾರ) ಸಂಜೆ ನಂತರ ಸಭೆ ನಡೆಸಲಿದ್ದಾರೆ. ಹಾಗಾಗಿ ಬಿಜೆಪಿ ಕಚೇರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಎಲ್ಲ ಸಚಿವರು ಆಗಮಿಸಿದ್ದಾರೆ.
ಈ ಮಧ್ಯೆಕರ್ನಾಟಕ ಬಿಜೆಪಿ ಉಸ್ತುವಾರಿ ಬರುವ ಸ್ವಲ್ಪ ಮೊದಲು ಕಾಂಗ್ರೆಸ್‌ನಿಂದ ವಲಸೆ ಬಂದ ಸಚಿವರು ಪ್ರತ್ಯೇಕ ಸಭೆ ನಡೆಸಿದ್ದಾರೆ. ಸಚಿವ ಬಿ.ಸಿ. ಪಾಟೀಲ್ ನಿವಾಸದಲ್ಲಿ ಇವರ ಸಭೆ ನಡೆಯಿತು. ಸಚಿವರಾದ ಎಸ್.ಟಿ. ಸೋಮಶೇಖರ್​, ಶಿವರಾಂ ಹೆಬ್ಬಾರ್, ಡಾ.ಕೆ. ಸುಧಾಕರ್ ಮೊದಲಾದವರು ಭಾಗಿಯಾಗಿದ್ದರು ಎನ್ನಲಾಗಿದೆ.

ಪ್ರಮುಖ ಸುದ್ದಿ :-   ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement