ಮಕ್ಕಳ ಕಲ್ಯಾಣ ಇಲಾಖೆ ಮೂಲಕವೇ ಅನಾಥ ಮಕ್ಕಳ ದತ್ತು ಪ್ರಕ್ರಿಯೆ: ಸಚಿವೆ ಶಶಿಕಲಾ ಜೊಲ್ಲೆ

ಹಾವೇರಿ: ಕೋವಿಡ್ ಸೋಂಕಿನಿಂದ ಪಾಲಕರನ್ನು ಕಳೆದುಕೊಂಡು ಅನಾಥರಾಗಿರುವ ಮಕ್ಕಳನ್ನು ಯಾರೂ ನೇರವಾಗಿ ದತ್ತು ಪಡೆಯಲು ಅವಕಾಶವಿರುವುದಿಲ್ಲ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದಲೇ ದತ್ತು ಪ್ರಕ್ರಿಯೆ ನಡೆಸಿ ಪಡೆಯಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಶ್ರೀಮತಿ ಶಶಿಕಲಾ ಜೊಲ್ಲೆ ಅವರು ತಿಳಿಸಿದ್ದಾರೆ.
ಹಾವೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್‍ನಿಂದ ಪಾಲಕರನ್ನು ಕಳೆದುಕೊಂಡ ಮಕ್ಕಳಿದ್ದಲ್ಲಿ ಇಲಾಖೆಯ ಸಹಾಯವಾಣಿ 1098ಕ್ಕೆ ಸಂಪರ್ಕಿಸಿ ಮಾಹಿತಿ ಕೊಡಬೇಕು. ಕೆಲವು ಸಾಮಾಜಿಕ ಜಾಲತಾಣದಲ್ಲಿ ಕೋವಿಡ್‍ನಿಂದ ಪಾಲಕರನ್ನು ಕಳೆದುಕೊಂಡ ಅನಾಥ ಮಕ್ಕಳನ್ನು ಸಾಕುವುದಾಗಿ ಸಂದೇಶಗಳು ಹರಿದಾಡುತ್ತಿವೆ. ಯಾರೂ ಸಹ ಈ ಸಂದೇಶಗಳನ್ನು ನಂಬದೇ ಸಂದೇಶದಲ್ಲಿರುವ ಮೊಬೈಲ್ ಸಂಖ್ಯೆಗಳಿಗೆ ಸಂಪರ್ಕಿಸಿ ಮೋಸಹೋಗದಂತೆ ಜಾಗೃತಿಯಿಂದ ಇರಬೇಕು ಎಂದು ತಿಳಿಸಿದರು.
ಕೋವಿಡ್ ಸೋಂಕಿನಿಂದ ಮೂವರು ಅಂಗನವಾಡಿ ಕಾರ್ಯಕರ್ತೆಯರು ಮರಣಹೊಂದಿದ್ದಾರೆ. ತಲಾ 30 ಲಕ್ಷ ರೂ. ಪರಿಹಾರ ಪಾವತಿ ಪ್ರಕ್ರಿಯೆ ನಡೆಯುತ್ತಿದೆ. ಕಳೆದ ಬಾರಿ ಕೋವಿಡ್‍ಗೆ ಮೃತಪಟ್ಟ ಎಲ್ಲ ಅಂಗನವಾಡಿ ಕಾರ್ಯಕರ್ತೆಯರಿಗೆ ಪರಿಹಾರ ಪಾವತಿಸಲಾಗಿದೆ ಎಂದು ಹೇಳಿದರು.
ಕೋವಿಡ್ ಮೂರನೇ ಅಲೆಯು ಮಕ್ಕಳ ಮೇಲೆ ಪ್ರಭಾವ ಬೀರುತ್ತದೆ ಎಂಬ ತಜ್ಞರ ಅಭಿಪ್ರಾಯದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡು, ಮಕ್ಕಳು ಸೋಂಕಿಗೆ ತುತ್ತಾಗದಂತೆ ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಸೋಂಕಿಗೆ ತುತ್ತಾದಲ್ಲಿ ಮಕ್ಕಳಿಗೆ ಪ್ರತ್ಯೇಕ ಚಿಕಿತ್ಸಾ ವ್ಯವಸ್ಥೆ ಕುರಿತಂತೆ ಜಿಲ್ಲಾಡಳಿತ ಕೈಗೊಂಡಿರುವ ಕ್ರಮಗಳ ಕುರಿತಂತೆ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದರು.
ರಾಜ್ಯದಲ್ಲಿ ಈವರೆಗೆ 1735 ಹಾಗೂ ಹಾವೇರಿ ಜಿಲ್ಲೆಯಲ್ಲಿ 89 ಮಕ್ಕಳು ಕೋವಿಡ್ ಪಾಸಿಟಿವ್ ಸೋಂಕಿನಿಂದ ಬಳಲುತ್ತಿದ್ದಾರೆ. ಕೋವಿಡ್ ಸೋಂಕಿನ ಮಕ್ಕಳ ಮರಣ ಪ್ರಮಾಣ ಕಡಿಮೆ ಎಂದು ಹೇಳಿದರು. ತ್ತಿವೆ. ಯಾರೂ ಸಹ ಈ ಸಂದೇಶಗಳನ್ನು ನಂಬದೇ ಸಂದೇಶದಲ್ಲಿರುವ ಮೊಬೈಲ್ ಸಂಖ್ಯೆಗಳಿಗೆ ಸಂಪರ್ಕಿಸಿ ಮೋಸಹೋಗದಂತೆ ಸಾರ್ವಜನಿಕರು ಜಾಗೃತಿಯಿಂದ ಇರಬೇಕು ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement