ಹಾನಗಲ್ ಕ್ಷೇತ್ರಕ್ಕೆ ಈಗಲೇ ಅಭ್ಯರ್ಥಿ ಘೋಷಣೆ ಮಾಡಿದ ಜೆಡಿಎಸ್..!

ಬೆಂಗಳೂರು: ಕಳೆದ ವಾರವಷ್ಟೇ ಮಾಜಿ ಸಚಿವ ಹಾಗೂ ಹಾಲಿ ಹಾನಗಲ್‌ ಶಾಸಕ ಸಿ.ಎಂ ಉದಾಸಿ ನಿಧನರಾಗಿದ್ದು, ಅವರ ನಿಧನದಿಂದ ತೆರವಾದ ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್‌ ಈಗಲೇ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ…!
ನಿಯಾಜ್ ಶೇಖ್ ಅವರನ್ನು ಜೆಡಿಎಸ್ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಿದೆ. ನಿಯಾಜ್ ಶೇಖ್ ಮಂಗಳವಾರ ತಮ್ಮ ಬೆಂಬಲಿಗರೊಂದಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.
ಪಕ್ಷದ ಬಾವುಟ ನೀಡಿ ನಿಯಾಜ್ ಶೇಖ್ ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡ ಸಯ್ಯದ್ ಅಲ್ತಾ ಉಪಸ್ಥಿತರಿದ್ದರು. ನಿಯಾಜ್ ಶೇಖ್ ಅವರು ಹಾವೇರಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಸಂಘಟಿತ ಕಾರ್ಮಿಕರ ಘಟಕದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.
ಮಾಜಿ ಸಚಿವ ಸಿ.ಎಂ.ಉದಾಸಿ ಅವರು ನಿಧಾನರಾದ ಹಿನ್ನೆಲೆಯಲ್ಲಿ ತೆರವಾಗಿರುವ ಈ ಕ್ಷೇತ್ರಕ್ಕೆ ಉಪಚುನಾವಣೆ ಸದ್ಯದಲ್ಲೇ ನಡೆಯುವ ಸಾಧಯತೆ ಇರುವ ಹಿನ್ನೆಲೆಯಲ್ಲಿ, ಜೆಡಿಎಸ್‍ ನಿಯಾಜ್ ಶೇಖ್ ಅವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸುವ ಘೋಷಣೆ ಮಾಡಿದೆ.

 

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement