ಕರ್ನಾಟಕದಲ್ಲಿ ಆರು ಸಾವಿರಕ್ಕಿಂತ ಕಡಿಮೆಯಾದ ದೈನಂದಿನ ಕೋವಿಡ್‌ ಸೋಂಕು

ಬೆಂಗಳೂರು:ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಸತತವಾಗಿ ಇಳಿಯುತ್ತಿದೆ. ರಾಜ್ಯದಲ್ಲಿ ಗುರುವಾರ 5,983 ಜನರಿಗೆ ಸೋಂಕು ದೃಢಪಟ್ಟಿದೆ. 138 ಜನರು ಮೃತಪಟ್ಟಿದ್ದಾರೆ ಹಾಗೂ ಇದೇ ಸಮಸಯದಲ್ಲಿ 10,685 ಮಂದಿ ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದಾರೆ.
ಬೆಂಗಳೂರಿನಲ್ಲಿ 1,209 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, 17 ಜನರು ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಈವರೆಗೆ ಒಟ್ಟು 27,90,338 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 26,101,57 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಈಗ 1,46,726 ಸಕ್ರಿಯ ಪ್ರಕರಣಗಳಿವೆ. ಈವರೆಗೆ ಒಟ್ಟು 33,434 ಮಂದಿ ಕೊವಿಡ್​ನಿಂದ ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ ಇಂದು ಒಂದೇ ದಿನ 1,209 ಜನರಿಗೆ ಸೋಂಕು ದೃಢಪಟ್ಟಿದ್ದು, ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,01,963ಕ್ಕೇರಿಕೆಯಾಗಿದೆ. ಈ ಪೈಕಿ 11,07,648 ಜನ ಗುಣಮುಖರಾಗಿದ್ದಾರೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 17 ಜನರು ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ 15371 ಜನರು ಮೃತಪಟ್ಟಿದ್ದಾರೆ. 78943 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಜಿಲ್ಲಾವಾರು ಕೋವಿಡ್‌ ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

17-06-2021 HMB Kannada

ಪ್ರಮುಖ ಸುದ್ದಿ :-   ಬೆಂಗಳೂರಿನ ಹಲವೆಡೆ ಜೋರಾಗಿ ಮಳೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement