ಕರ್ನಾಟಕದ ಕರಾವಳಿ -ಮಲೆನಾಡು ಜಿಲ್ಲೆಗಳಲ್ಲಿ ಎರಡು ದಿನ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದ್ದು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 2 ದಿನ ಭಾರಿ ಮಳೆಯಾಗಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿನ್ನೆಯಿಂದ ಎಡಬಿಡದೆ ಮಳೆ ಸುರಿಯುತ್ತಿದೆ, ಚಿಕ್ಕಮಗಳೂರು, ಮೂಡಿಗೆರೆ, ಕೊಪ್ಪ, ಶೃಂಗೇರಿ, ಎನ್‌ಆರ್‌ಪುರ ತಾಲೂಕಿನಲ್ಲಿ ಭರ್ಜರಿ ಮಳೆಯಾಗಿದೆ.
ರಾಜ್ಯದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಎರಡು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಮುಂಗಾರು ಆರ್ಭಟ ಜೋರಾಗಿದ್ದು, ವಿವಿಧೆಡೆ ಧಾರಾಕಾರ ಮಳೆಯಾಗುತ್ತಿದೆ. ಅದರಲ್ಲೂ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಕೆಲ ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಸೇರಿದಂತೆ ಹಲವು ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ಹೇಳಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಸೇರಿದಂತೆ ಹಲವು ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಮಳೆಯಾಗಲಿದೆ.
ಈಗಾಗಲೇ ಹೊನ್ನಾವರ, ಗೋಕರ್ಣ, ಕಾರವಾರ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಸಾಗರ, ಆಗುಂಬೆ, ಕೊಲ್ಲೂರು, ಕದ್ರ, ಕೊಟ್ಟಿಗೆಹಾರ, ಭಾಗಮಂಡಲ, ಬೆಳ್ತಂಗಡಿ, ಕಳಸ, ಶೃಂಗೇರಿ, ವಿರಾಜಪೇಟೆ ಮೊಲಾದ ಕಡೆಗಳಲ್ಲಿ ಭಾರೀ ಮಳೆಯಾಗಿದೆ.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಕಾಲೇಜ್‌ ಕ್ಯಾಂಪಸ್‌ ನಲ್ಲೇ ಚಾಕುವಿನಿಂದ ಇರಿದು ಕಾರ್ಪೊರೇಟರ್ ಪುತ್ರಿಯ ಹತ್ಯೆ ; ಯುವಕನ ಬಂಧನ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement