ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ, ಅದಕ್ಕೆ ಉಪಚುನಾವಣೆ ಹಾಗೂ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಮುಂದೂಡಬೇಕು ಎಂದು ರಾಜ್ಯ ನಗರಾಭಿವೃದ್ಧಿ ಇಲಾಖೆ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಸಂಬಂಧಪಟ್ಟವರಿಗೆ ಸೂಚನೆ ನೀಡಿದೆ.
ಈ ಕುರಿತು ಗುರುವಾರ (ಜೂನ್ ೧೭) ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಸ್ಥಳೀಯ ನಗರ ಸಂಸ್ಥೆಗಳಾದ ನಗರಸ ಸಭೆ, ಪುರಸಭೆ, ಪಟ್ಟಣ ಪಂಚಾಯತ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಮಾಡುವುದ ಬಾಕಿ ಇದ್ದಲ್ಲಿ ಕೂಡಲೇ ಮುಂದೂಡುವುಂತೆಯೂ ಸೂಚಿಸಲಾಗಿದೆ. ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಕೆ.ಎಲ್.ಪ್ರಸಾದ ಈ ಆದೇಶ ಹೊರಡಿಸಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ