ಕರ್ನಾಟಕಕ್ಕೆ 4.38 ಲಕ್ಷ ಡೋಸ್‌ ಕೋವಿಡ್‌ ಲಸಿಕೆ ಪೂರೈಕೆ

ಬೆಂಗಳೂರು: ರಾಜ್ಯಕ್ಕೆ ಶುಕ್ರವಾರ ಹೊಸದಾಗಿ 4.83 ಲಕ್ಷ ಡೋಸ್‌ ಕೋವಿಶೀಲ್ಡ್ ಲಸಿಕೆ ಬಂದಿದೆ ಎಂದು ಆರೋಗ್ಯ ಹಾಗೂ ವೈದ್ಯಕೀಯ ಸಚಿವ ಡಾ. ಕೆ ಸುಧಾಕರ್‌‌ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು ರಾಜ್ಯಕ್ಕೆ ಶುಕ್ರವಾರ ಹೊಸದಾಗಿ ಆಗಮಿಸಿರುವ 4.83 ಲಕ್ಷ ಡೋಸ್ ಲಸಿಕೆಯ ಪೈಕಿ 3.15 ಲಕ್ಷ ಡೋಸ್ ಕೇಂದ್ರ ಸರ್ಕಾರ ರಾಜ್ಯಕ್ಕೆ ಕಳುಹಿಸಿಕೊಟ್ಟಿದೆ ಎಂದು ಅವರು ಹೇಳಿದ್ದಾರೆ.
ಉಳಿದ ಲಸಿಕೆಯನ್ನು ಅಂದರೆ 1.68 ಲಕ್ಷ ಡೋಸ್ ರಾಜ್ಯ ಸರ್ಕಾರ ಖರೀದಿ ಮಾಡಿದೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟ ನಾಗರಿಕರಿಗೆ ಲಸಿಕೆ ಹಾಕುವ ಕಾರ್ಯ ಪ್ರಗತಿಯಲ್ಲಿದೆ ಅದಕ್ಕೆ ಪೂರಕವಾಗಿ ಈ ಲಸಿಕೆಯನ್ನು ಬಳಸಿಕೊಳ್ಳಲಾಗುವುದು ಎಂದು ಕೂಡ ಅವರು ತಿಳಿಸಿದ್ದಾರೆ

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ಗೋಕರ್ಣ : ಸಮುದ್ರದ ಅಲೆಗೆ ಸಿಲುಕಿದ್ದ ಮೂವರು ಪ್ರವಾಸಿಗರ ರಕ್ಷಣೆ

ನಿಮ್ಮ ಕಾಮೆಂಟ್ ಬರೆಯಿರಿ

advertisement