ಕರ್ನಾಟಕದಲ್ಲಿ ಶುಕ್ರವಾರ 5,783 ಹೊಸ ಕೊರೊನಾ ಪ್ರಕರಣಗಳು ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ (ಶುಕ್ರವಾರ) ಅವಧಿಯಲ್ಲಿ 5,783 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇದೇ ಸಮಯದಲ್ಲಿಸೋಂಕಿನಿಂದ ಇಂದು 168 ಮಂದಿ ಮೃತಪಟ್ಟಿದ್ದಾರೆ ಹಾಗೂ 15,290 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ರಾಜ್ಯದಲ್ಲಿ ಕೋವಿಡ್- 19 ಒಟ್ಟು ಸೋಂಕಿತರ ಸಂಖ್ಯೆ 2796121ಕ್ಕೆ ಏರಿದೆ. ಆಸ್ಪತ್ರೆಯಿಂದ ಬಿಡುಗಡೆಯಾದವರ ಒಟ್ಟು ಸಂಖ್ಯೆ 2625447ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿನ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 137050 ಆಗಿದೆ. ಒಟ್ಟಾರೇ ಮೃತರ ಸಂಖ್ಯೆ 33,602 ಆಗಿದೆ. ಸೋಂಕಿನ ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ ಶೇ.4.05, ಮರಣ ಪ್ರಮಾಣ ಶೇ.2.90 ರಷ್ಟಿದೆ.
ಬೆಂಗಳೂರು ನಗರದಲ್ಲಿ 1,100 ಪ್ರಕರಣಗಳು ಪತ್ತೆಯಾಗಿದ್ದರೆ, 6,160 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 39 ಮಂದಿ ಮೃತಪಟ್ಟಿದ್ದಾರೆ.
ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

18-06-2021 HMB Kannada

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement