ಕೊನೆಗೂ ಈಡೇರಿದ ಬೇಡಿಕೆ:ದೈಹಿಕ ಶಿಕ್ಷಣ ಪರಿವೀಕ್ಷಕರ ಹುದ್ದೆಗೆ ಬಡ್ತಿಗೆ ಆದೇಶ

ಬೆಂಗಳೂರು: ಸರ್ಕಾರಿ ಪ್ರೌಢ ಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರ ಬೇಡಿಕೆಯಾಗಿದ್ದ ದೈಹಿಕ ಶಿಕ್ಷಣ ಪರಿವೀಕ್ಷಕರ ಹುದ್ದೆಗೆ ಬಡ್ತಿಗೆ ಸಂಬಂಧಿಸಿದಂತೆ ಆದೇಶ ಹೊರಡಿಸಲಾಗಿದೆ.
ಈ ಕುರಿತು ಪ್ರಕರಣೆ ನೀಡಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶಕುಮಾರ್ ಅವರು, ಸರ್ಕಾರಿ ಪ್ರೌಢ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಗ್ರೇಡ್-1 ಹುದ್ದೆಯಿಂದ ಗ್ರೂಪ್-ಬಿ ವೃಂದದ ದೈಹಿಕ ಶಿಕ್ಷಣ ಪರಿವೀಕ್ಷಕರ 148 ಹುದ್ದೆಗಳಿಗೆ ಮುಂಬಡ್ತಿಯನ್ನು ನೀಡಿ ಆದೇಶ ಹೊರಡಿಸುವ ಮೂಲಕ ಕರ್ನಾಟಕ ರಾಜ್ಯ ಸರ್ಕಾರಿ ಪ್ರೌಢ ಶಾಲಾ ದೈಹಿಕ ಶಿಕ್ಷಕರ ಸಂಘದ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದಂತಾಗಿದೆ ಎಂದು ತಿಳಿಸಿದ್ದಾರೆ.
2016ರಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಪದೋನ್ನತಿ ಪ್ರಕ್ರಿಯೆ ನಡೆದಿದ್ದು, ಐದು ವರ್ಷಗಳ ಕಾಲ ಪ್ರೌಢ ಶಾಲಾ ದೈಹಿಕ ಶಿಕ್ಷಕರಿಗೆ ಯಾವುದೇ ಪದೋನ್ನತಿ ನೀಡಿರಲಿಲ್ಲ. ನೆನೆಗುದಿಗೆ ಬಿದ್ದಿದ್ದ ಬಡ್ತಿ ಪ್ರಕ್ರಿಯೆಗೆ ಚಾಲನೆ ನೀಡಿದ್ದು ಆಡಳಿತಾತ್ಮಕ ಸಮಸ್ಯೆ ಬಗೆಹರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ದೈಹಿಕ ಶಿಕ್ಷಣ ಪರಿವೀಕ್ಷಕರ ಹುದ್ದೆಗೆ ಜೂನ್ 21ರಂದು ಕೌನ್ಸೆಲಿಂಗ್ ಮೂಲಕ ಸ್ಥಳ ನಿಯುಕ್ತಿ ಮಾಡಲಾಗುತ್ತಿದ್ದು, ಕೋವಿಡ್ ನಿಯಮಗಳನ್ನು ಪಾಲಿಸಿ ದೈಹಿಕ ಶಿಕ್ಷಕರು ಕೌನ್ಸೆಲಿಂಗ್ ನಲ್ಲಿ ಭಾಗವಹಿಸಿ ಸ್ಥಳಗಳನ್ನು ಆಯ್ಕೆ ಮಾಡಿಕೊಳ್ಳಬಹುದಾಗಿದೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಏಪ್ರಿಲ್‌ 18, 19ರಂದು ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement