ಮೇಕೆದಾಟು ಯೋಜನೆಗೆ ಎನ್​ಜಿಟಿ ಹಸಿರು ನಿಶಾನೆ, ಇದು ನಮಗೆ ಶುಭ ಸುದ್ದಿ: ಸಿಎಂ ಬಿಎಸ್‌ವೈ

ಬೆಂಗಳೂರು: ರಾಜ್ಯದ ಮಹತ್ವಕಾಂಕ್ಷೆಯ ಮೇಕೆದಾಟು ಯೋಜನೆಗೆ ಹಸಿರು ನಿಶಾನೆ ಸಿಕ್ಕಿದೆ. ಇದು ನಮಗೆ ಶುಭದಾಯಕ ವಿಚಾರ. ಕರ್ನಾಟಕದ ಪ್ರಕರಣವನ್ನು ಮುಕ್ತಾಯಗೊಳಿಸಿರುವ ರಾಷ್ಟ್ರೀಯ ಹಸಿರು ಪೀಠ (ಎನ್​ಜಿಟಿ) ಯೋಜನೆಗೆ ಹಸಿರು ನಿಶಾನೆ ತೋರಿದೆ ಎಂದು ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ತಿಳಿಸಿದರು.
ಮೇಕೆದಾಟು ಸ್ಥಳ ಪರಿಶೀಲನೆಗಾಗಿ ಸಮಿತಿ ರಚಿಸಿ ದಕ್ಷಿಣ ಪೀಠ ನೀಡಿದ್ದ ಆದೇಶ ಪ್ರಶ್ನಿಸಿದ್ದ ಕರ್ನಾಟಕ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿರುವ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಪೀಠ ಗುರುವಾರ ತೀರ್ಪು ಕಾಯ್ದಿರಿಸಿತ್ತು. ಇಂದು (ಶುಕ್ರವಾರ) ವಿಚಾರಣೆ ಮುಕ್ತಾಯಗೊಳಿಸಿದ ಎನ್‌ಜಿಟಿ ,ಚೆನ್ನೈನಲ್ಲಿರುವ ದಕ್ಷಿಣ ಪೀಠದ ದೂರನ್ನು ವಜಾಗೊಳಿಸಿ ಆದೇಶಿಸಿದ್ದು, ಯೋಜನೆ ಆರಂಭಕ್ಕೆ ಅನುಮತಿ ನೀಡಿದೆ. ಯೋಜನೆ ಬಗ್ಗೆ ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಈ ಯೋಜನೆಯಿಂದ 4500 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗಲಿದ್ದು, ಬೆಂಗಳೂರಿಗೆ ಕುಡಿಯುವ ನೀರು ಸಿಗಲಿದೆ. ಆದರೆ, ತಮಿಳುನಾಡು ಸರ್ಕಾರ ಈ ಯೋಜನೆಗೆ ವಿರೋಧಿಸಿ ಎನ್​ಜಿಟಿ ಮುಂದೆ ಅರ್ಜಿ ಸಲ್ಲಿಸಿತ್ತು. ಈಗ ಎನ್​ಜಿಟಿ ಇದಕ್ಕೆ ಹಸಿರು ನಿಶಾನೆ ತೋರಿದೆ. ಈ ಕಾಮಗಾರಿ ಆರಂಭಕ್ಕೆ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.
ಕಾವೇರಿಯ ಹೆಚ್ಚುವರಿ ನೀರನ್ನು ತಡೆದು ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳ ಜನರಿಗೆ ಕುಡಿಯುವ ನೀರು ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮೇಕೆದಾಟು ಯೋಜನೆ ರೂಪಿಸಿತ್ತು. ತಮಿಳುನಾಡು ಸರ್ಕಾರ ಇದಕ್ಕೆ ತಕರಾರು ತೆಗೆದಿದ್ದರಿಂದ ಸ್ಥಳದಲ್ಲಿ ಯಾವುದೇ ಕಾಮಗಾರಿ ನಡೆದಿಲ್ಲ.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

4.5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement