ಸಿಎಂ ಬಿಎಸ್‌ವೈ ನಾಯಕತ್ವದಲ್ಲಿ ಬದಲಾವಣೆ ಇಲ್ಲ; ಬಿಜೆಪಿ ಕೋರ್ ಕಮಿಟಿ ಸಭೆಯ ನಂತರ ಸಚಿವ ಅಶೋಕ ಹೇಳಿಕೆ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆಯಾಗಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪನವರೇ ನಮ್ಮ ನಾಯಕರು. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.
ಬಿಜೆಪಿ ಕೋರ್ ಕಮಿಟಿ ಸಭೆ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಪಕ್ಷ, ಸರ್ಕಾರದ ವಿರುದ್ಧ ಬಹಿರಂಗ ಹೇಳಿಕೆ ನೀಡಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಎರಡು ದಿನಗಳಲ್ಲಿ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ಅರುಣ್ ಸಿಂಗ್ ಕೋರ್ ಕಮಿಟಿ ಸಭೆಯಲ್ಲಿ ಭರವಸೆ ನೀಡಿದ್ದಾರೆ. ಅವರ ಭೇಟಿಯಲ್ಲಿ ಸಂಪುಟ ಪುನಾರಚನೆ ಬಗ್ಗೆಯೂ ಯಾವುದೇ ಚರ್ಚೆ ಆಗಿಲ್ಲ ಎಂದು ಹೇಳಿದರು.
ಶಾಸಕ ಅರವಿಂದ್ ಬೆಲ್ಲದ್ ಮಾಡಿರುವ ಪೋನ್‌ ಕದ್ದಾಲಿಕೆ ಆರೋಪದ ಬಗ್ಗೆಯೂ ಗಮನಹರಿಸಿದೆ ಎಂದು ತಿಳಿಸಿದರು.
ಕೋರ್ ಕಮಿಟಿ ಸಭೆಯಲ್ಲಿ ಸರ್ಕಾರದ ಇಮೇಜ್ ಹೆಚ್ಚಿಸಲು ಚರ್ಚಿಸಲಾಗಿದೆ. ಪಕ್ಷ ಮತ್ತು ಸರ್ಕಾರದ ನಡುವೆ ಹೊಂದಾಣಿಕೆ ಹೆಚ್ಚಿಸಲು ನಿರ್ಧರಿಸಲಾಗಿದೆ. ಕಾಂಗ್ರೆಸ್ ತುರ್ತು ಪರಿಸ್ಥಿತಿ ಹೇರಿದ್ದನ್ನು ಖಂಡಿಸಿ ಜೂನ್ 25ರಂದು ಕರಾಳ ದಿನ ಆಚರಿಸಲು ನಿರ್ಣಯ ಕೈಗೊಳ್ಳಲಾಗಿದೆ. ಕೊವಿಡ್ ನಿಯಮ ಪಾಲಿಸಿ ರಾಜ್ಯದ ಪ್ರತಿ ತಾಲೂಕಿನಲ್ಲೂ ಯೋಗ ದಿನ ಆಚರಿಸಲಾಗುತ್ತದೆ. ಜಿ.ಪಂ, ತಾ.ಪಂ ಚುನಾವಣೆಗಳಿಗೆ ಸಿದ್ಧತೆ ನಡೆಸಲು ಪಕ್ಷದ ಜಿಲ್ಲಾ ಘಟಕಗಳಿಗೆ ಸೂಚನೆ ನೀಡಲಾಗಿದೆ. ಜೂನ್ 26ರಂದು ಬೆಂಗಳೂರಿನಲ್ಲಿ ರಾಜ್ಯ ಕಾರ್ಯಕಾರಿಣಿ ನಡೆಯಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement