ಬೆಂಗಳೂರು:ರಾಜ್ಯದಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕಿನ ಪಾಸಿಟಿವಿ ದರ ಶೇ. 3.38 ಕ್ಕೆ ಕುಸಿದಿದ್ದು ಸಾವಿನ ಪ್ರಮಾಣ ಶೇ.2.76 ರಷ್ಟು ಇದೆ.
ಶನಿವಾರ ಸೋಂಕಿತರಿಗಿಂತ ಚೇತರಿಕೆ ಪ್ರಮಾಣ ದ್ವಿಗುಣಗೊಂಡಿದೆ. ಕಳೆದ 24 ಗಂಟೆಯಲ್ಲಿ (ಶನಿವಾರ) ರಾಜ್ಯದಲ್ಲಿ ಹೊಸದಾಗಿ 5,815 ,ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಒಟ್ಟಾರೆಯಾಗಿ ಸೋಂಕಿನ ಸಂಖ್ಯೆ 28,01,936 ಕ್ಕೆ ಹೆಚ್ಚಳವಾಗಿದೆ. ಇದೇ ಸಮಯದಲ್ಲಿ 11,832 ಮಂದಿ ಚೇತರಿಸಿಕೊಂಡು ಬಿಡುಗಡೆಯಾಗಿದ್ದು, ರಾಜ್ಯದಲ್ಲಿ ಇಲ್ಲಿಯವರೆಗೂ ಚೇತರಿಸಿಕೊಂಡವರ ಸಂಖ್ಯೆ 2625442 ಕ್ಕೆ ಹೆಚ್ಚಳವಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ ರಾಜ್ಯದಲ್ಲಿ ಶನಿವಾರ 161 ಜನರು ಮೃತಪಟ್ಟಿದ್ದಾರೆ.ಇದುವರೆಗೂ ಮೃತಪಟ್ಟವರ ಸಂಖ್ಯೆ 33,763 ಕ್ಕೆ ಏರಿಕೆಯಾಗಿದೆ.ರಾಜಧಾನಿ ಬೆಂಗಳೂರಿನಲ್ಲಿ ಶನಿವಾರ 1263 ಮಂದಿಗೆ ಸೋಂಕು ಕಾಣಿಸಿಕೊಂಡಿದೆ.
ರಾಜ್ಯದಲ್ಲಿ ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 1,30,872 ಕುಸಿದಿದೆ.
ಹೊಸದಾಗಿ 1,236 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡು 2821 ಮಂದಿ ಚೇತರಿಸಿಕೊಂಡಿದ್ದಾರೆ.
ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ