ಜಮ್ಮು-ಕಾಶ್ಮೀರ ಕೇಂದ್ರಾಡಳಿತವಾದ ನಂತರ ಜೂ.24 ರಂದು ಮೊದಲಬಾರಿಗೆ ಸರ್ವಪಕ್ಷಗಳ ಸಭೆ ಕರೆದ ಪ್ರಧಾನಿ

ನವದೆಹಲಿ:ಪ್ರಧಾನಿ ನರೇಂದ್ರ ಮೋದಿ ಜೂನ್​24 ರಂದು ಜಮ್ಮು-ಕಾಶ್ಮೀರದ ಸರ್ವ ಪಕ್ಷಗಳ ಸಭೆಗೆ ಕರೆದಿದ್ದು ಎಲ್ಲ ಪಕ್ಷಗಳ ನಾಯಕರಿಗೂ ಅನೌಪಚಾರಿಕ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ.
ಬಿಜೆಪಿ ಪಕ್ಷದ ಮಾಜಿ ಮೈತ್ರಿ ಪಕ್ಷವಾಗಿದ್ದ ಪಿಡಿಪಿ ಪಕ್ಷದ ಮುಖ್ಯಸ್ಥೆ ಹಾಗೂ ಮಾಜಿ ಸಿಎಂ ಮೆಹಬೂಬಾ ಮುಫ್ತಿ “ಸರ್ವ ಪಕ್ಷಗಳ ಸಭೆಗೆ ನನಗೆ ಆಹ್ವಾನ ಬಂಧಿದ್ದು, ಸಭೆಯಲ್ಲಿ ನಾನು ಭಾಗವಹಿಸಲಿದ್ದೇನೆ” ಎಂಬುದನ್ನು ಖಚಿತಪಡಿಸಿದ್ದಾರೆ. ಆಗಸ್ಟ್‌ 5, 2019 ರಂದು ಕೇಂದ್ರ ಸರ್ಕಾರ ಸಂವಿಧಾನದ ಅನುಚ್ಛೇಧ 370 ರ ಅಡಿ ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇ‍ಷ ಸ್ಥಾನಮಾನ ರದ್ದುಮಡಿಸಿ ಜಮ್ಮು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿತ್ತು. ಇದರ ನಂತರ ಕಣಿವೆ ರಾಜ್ಯದಲ್ಲಿ ನಡೆಯುತ್ತಿರುವ ಮೊದಲ ಸರ್ವ ಪಕ್ಷಗಳ ಸಭೆ ಇದಾಗಿದೆ.ಜಮ್ಮು-ಕಾಶ್ಮೀರದ ಒಂಭತ್ತು ಪಕ್ಷಗಳನ್ನು ಸಭೆಗೆ ಆಹ್ವಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಈ ಪಟ್ಟಿಯಲ್ಲಿ ಜಮ್ಮು ಮತ್ತು ಕಾಶ್ಮೀರದ ಎರಡು ಪ್ರಮುಖ ಪಕ್ಷಗಳಿಗೆ ಈವರೆಗೆ ಔಪಚಾರಿಕ ಆಹ್ವಾನವನ್ನು ಕಳುಹಿಸಲಾಗಿಲ್ಲ. ಹೀಗಾಗಿ ರಾಜಕೀಯ ಪ್ರಕ್ರಿಯೆ ನಡೆಯಲು ಸಮಯವಿದೆ ಎಂದು ಪೀಪಲ್ಸ್ ಕಾನ್ಫರೆನ್ಸ್ ಮುಖಂಡ ಸಜಾದ್ ಲೋನ್ ಮತ್ತು ಅಪ್ನಿ ಪಕ್ಷದ ನಾಯಕ ಅಲ್ತಾಫ್ ಬುಖಾರಿ ಹೇಳಿದ್ದಾರೆ.
ಫಾರುಕ್ ಅಬ್ದುಲ್ಲಾ,ಒಮರ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ ಸೇರಿ ಕಾಶ್ಮೀರದ ನಾಯಕರನ್ನೆಲ್ಲ ಕೇಂದ್ರ ಸರ್ಕಾರ ಬಂಧನದಲ್ಲಿ ಇರಿಸಿತ್ತು. 22 ತಿಂಗಳ ನಂತರವೂ ಜಮ್ಮು ಕಾಶ್ಮೀರದಲ್ಲಿ ನಿರ್ಭಂಧಗಳು ತೆರವಾಗಿಲ್ಲ.
ಈಗ ಕೇಂದ್ರ ಸರ್ಕಾರ ಜಮ್ಮು ಕಾಶ್ಮೀರದ ರಾಜಕೀಯ ಪಕ್ಷಗಳ ಜೊತೆ ಸರ್ವಪಕ್ಷ ಸಭೆಯನ್ನು ನಡೆಸಲು ಮುಂದಾಗಿದ್ದು, ಜೂನ್‌ 24 ರಂದು ಪ್ರಧಾನಿ ಮೋದಿ ಜಮ್ಮು ಮತ್ತು ಕಾಶ್ಮೀರದ ಎಲ್ಲ ರಾಜಕೀಯ ನಾಯಕರ ಜೊತೆ ದೆಹಲಿಯಲ್ಲಿ ಚರ್ಚೆ ನಡೆಸಲಿದ್ದಾರೆ. ಸರ್ವಪಕ್ಷ ಸಭೆಯ ಅಧ್ಯಕ್ಷತೆಯನ್ನೂ ಪ್ರಧಾನಿಗಳೇ ವಹಿಸಲಿದ್ದಾರೆ ಎಂದು ಪಿಎಂಒ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರಕ್ಕೆ ಈ ಹಿಂದೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಮರಳಿ ಪಡೆಯುವ ಕುರಿತು ಪ್ರಧಾನಿಯವರೊಂದಿಗೆ ಚರ್ಚೆ ನಡೆಸಲು ಸಿದ್ಧರಿದ್ದೇವೆ ಎಂದು ಜಮ್ಮು ಕಾಶ್ಮೀರದ ರಾಜಕೀಯ ನಾಯಕರುಗಳು ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಇವಿಎಂ ಮತಗಳ ಜೊತೆ ವಿವಿಪ್ಯಾಟ್ ಮತಗಳ ಸಂಪೂರ್ಣ ಎಣಿಕೆ : ಎಲ್ಲ ಅರ್ಜಿಗಳನ್ನು ವಜಾ ಮಾಡಿದ ಸುಪ್ರೀಂ ಕೋರ್ಟ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement