ಹಿನ್ನೀರು ಪ್ರದೇಶದಲ್ಲಿ ಭಾರೀ ಮಳೆ : ಕದ್ರಾ ಅಣೆಕಟ್ಟಿನಿಂದ ಒಟ್ಟು  26,916 ಕ್ಯೂಸೆಕ್ ನೀರು ಹೊರಕ್ಕೆ

ಕಾರವಾರ: ತಾಲೂಕಿನ ಕದ್ರಾ ಜಲಾಶಯದ ಹಿನ್ನೀರು ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಅಣೆಕಟ್ಟಿನ ಗರಿಷ್ಠ ಮಟ್ಟವು ಶೀಘ್ರವೇ ತಲುಪುವು ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಮೂರು ಕ್ರಸ್ಟ್ ಗೇಟ್‍ಗಳನ್ನು ತೆರೆದು ನೀರು ಬಿಡುಗಡೆ ಮಾಡಲಾಗಿದೆ.

ಕದ್ರಾ ಜಲಾಶಯದ ಗರಿಷ್ಠ ಮಟ್ಟವು 34.50 ಮೀ. ಗಳಾಗಿದ್ದು ಸದ್ಯ 31.42 ಮೀ. ತಲುಪಿದೆ. ಇನ್ನು ಒಳ ಹರಿವಿನ ಪ್ರಮಾಣ ಶನಿವಾರ 23,742 ಕ್ಯೂಸೆಕ್ ಇದೆ. ಜೊತೆಗೆ ಈಗಾಗಲೇ ಆಣೆಕಟ್ಟೆಯ ಹಿನ್ನೀರು ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು ಶುಕ್ರವಾರ 95.5 ಮಿ.ಮೀ. ಮಳೆಯಾಗಿದೆ. ಹೀಗಾಗಿ ಒಳ ಹರಿವಿನ ಪ್ರಮಾಣ ಇನ್ನಷ್ಟು ಹೆಚ್ಚಲಿದೆ. ಆದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಕೆಪಿಸಿಎಲ್ ಅಧಿಕಾರಿಗಳು ಜಿಲ್ಲಾಡಳಿತದ ಸೂಚನೆಯಂತೆ ಸದ್ಯ ಮೂರು ಕ್ರಸ್ಟ್ ಗೇಟ್‍ಗಳನ್ನು ತೆರೆದು ಹೆಚ್ಚುವರಿ 5,500 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. ಇದಲ್ಲದೇ ವಿದ್ಯುತ್ ಉತ್ಪಾದಿಸುವ ಮೂಲಕ ವಿದ್ಯುತ್ ಘಟಕದಿಂದ 21,416 ಕ್ಯೂಸೆಕ್ ನೀರನ್ನು ಹೊರ ಬಿಡಲಾಗುತ್ತಿದ್ದು ಒಟ್ಟು 26,916 ಕ್ಯೂಸೆಕ್ ನೀರು ಜಲಾಶಯದಿಂದ ಹೊರ ಬರುತ್ತಿದೆ. ಜಲಾಶಯದ ಎದುರಿನ ಕದ್ರಾ ಹಾಗ ಮಲ್ಲಾಪುರಗಳನ್ನು ಸಂಪರ್ಕಿಸುವ ಸೇತುವೆಯು ಮುಳುಗಡೆಯಾಗಿದ್ದು ಈ ಮಾರ್ಗದಲ್ಲಿ ಸಂಚರಿಸಬೇಕಾದ ಲಘು ವಾಹನಗಳಿಗೆ ಅಣೆಕಟ್ಟೆಯ ಮೇಲಿನಿಂದ ಸಂಚರಿಸಲು ಅವಕಾಶ ಮಾಡಿಕೊಡಲಾಗಿದೆ.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಅಂಜಲಿ ಹತ್ಯೆ ಆರೋಪಿ ಬಂಧನ ; ಈತನ ಬಂಧನವಾಗಿದ್ದೇ ರೋಚಕ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement