ಕರ್ನಾಟಕದಲ್ಲಿ ಭಾನುವಾರ 5 ಸಾವಿರಕ್ಕಿಂತ ಕಡಿಮೆಯಾದ ದೈನಂದಿನ ಪ್ರಕರಣ, ಶೇ.2.58 ಕ್ಕೆ ಕುಸಿದ ಪಾಸಿಟಿವಿಟಿ ದರ

ಬೆಂಗಳೂರು: ಕರ್ನಾಟಕದಲ್ಲಿ ಹಲವು ದಿನಗಳ ನಂತರ ಇದೇ ಮೊದಲ ಬಾರಿಗೆ ಭಾನುವಾರ ಕೊರೊನಾ ಸೋಂಕಿತರ ಸಂಖ್ಯೆ 5 ಸಾವಿರಕ್ಕಿಂತ ಕಡಿಮೆ ದಾಖಲಾಗಿದೆ. ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದೆ.
ಮತ್ತೊಂದು ಸಮಾಧಾನದ ಸಂಗತಿಯೆಂದರೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಭಾನುವಾರ ಶೇ.2.58 ಕ್ಕೆ ಕುಸಿದಿದೆ. ಅ ಎಂದು ರಾಜ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.ರಾಜ್ಯದಲ್ಲಿ ಭಾನುವಾರ ಹೊಸದಾಗಿ 4,517 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು 120 ಮಂದಿ ಮೃತಪಟ್ಟಿದ್ದಾರೆ. 8,456 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 1,26,813 ಸಕ್ರಿಯ ಪ್ರಕರಣಗಳಿವೆ.
ರಾಜ್ಯದಲ್ಲಿ ಒಟ್ಟು ಸೋಂಕು 28,06,453ಕ್ಕೆ ಏರಿಕೆಯಾಗಿದೆ. ಇದುವರೆಗೆ ಗುಣಮುಖರಾದವರ ಒಟ್ಟು ಸಂಖ್ಯೆ 26,45,735ಕ್ಕೆ ತಲುಪಿದೆ. ಒಟ್ಟು ಮೃತಪಟ್ಟವರ ಸಂಖ್ಯೆ 33 ,883 ಕ್ಕೆ ಏರಿಕೆಯಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ 933 ಜನರಿಗೆ ಸೋಂಕುದಾಖಲಾಗಿದೆ. ಒಟ್ಟು ಸೋಂಕು ಪ್ರಕರಣಗಳ ಸಂಖ್ಯೆ 12,05 259ಕ್ಕೆ ಏರಿಕೆಯಾಗಿದೆ. 1,902 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೂ ಒಟ್ಟು 11,18 ,531 ಜನರು ಗುಣಮುಖರಾಗಿದ್ದಾರೆ. ಸದ್ಯ, 71282 ಸಕ್ರಿಯ ಪ್ರಕರಣಗಳಿವೆ.
ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

ಪ್ರಮುಖ ಸುದ್ದಿ :-   ವಾಟ್ಸಾಪ್​ನಲ್ಲಿ ಮದುವೆ ಆಮಂತ್ರಣ ಕಾರ್ಡ್‌ ಬಂದ್ರೆ ಕ್ಲಿಕ್ ಮಾಡುವ ಮುನ್ನ ಎಚ್ಚರ ; ಕ್ಲಿಕ್ ಮಾಡಿ 10 ಲಕ್ಷ ರೂ. ಕಳೆದುಕೊಂಡ ಅಧಿಕಾರಿ !

20-06-2021 HMB Kannada

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement