ಕೋವಿಡ್ ಮೂರನೇ ಅಲೆಯು ಕರ್ನಾಟಕದಲ್ಲಿ 3.4 ಲಕ್ಷ ಮಕ್ಕಳಿಗೆ ಬಾಧಿಸಬಹುದು:ತಜ್ಞರ ಸಮಿತಿ

ಬೆಂಗಳೂರು: ದೇಶದಲ್ಲಿ ಕೊರೊನಾ ಮೂರನೇ ಅಲೆ ಅನಿವಾರ್ಯ ಎಂದು ತಜ್ಞರು ಎಚ್ಚರಿಸಿದ ಬೆನ್ನಲ್ಲೇ ರಾಜ್ಯದಲ್ಲಿ ಸರಿ ಮಕ್ಕಳಲ್ಲಿ ಹೆಚ್ಚಾಗಿ ಸೋಂಕು ಕಾಣಿಸಿಕೊಳ್ಳುವ ಸಾಧ್ಯತೆ ಇದೆ ಎಂದು ತಜ್ಞರ ತಂಡ ಎಚ್ಚರಿಕೆ ನೀಡಿದೆ.
“ಸಂಪ್ರದಾಯಬದ್ಧ ಅಂದಾಜಿನಂತೆ ಗಮನದಲ್ಲಿಟ್ಟುಕೊಂಡು ಕರ್ನಾಟಕದ 3.4 ಲಕ್ಷ ಮಕ್ಕಳು ಮೂರನೇ ಅಲೆಯಲ್ಲಿ ತುತ್ತಾಗುವ ಸಾಧ್ಯತೆಯಿದೆ ಎಂದು ಸಮಿತಿ ಶನಿವಾರ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ ಮಧ್ಯಂತರ ವರದಿಯಲ್ಲಿ ತಿಳಿಸಿದೆ.
ಮೂರನೇ ಅಲೆಯ ನಿಯಂತ್ರಣ ಮತ್ತು ಅದರ ಪರಿಹಾರ ಕುರಿತಂತೆ ರಾಜ್ಯ ಸರ್ಕಾರದಿಂದ ನೇಮಕವಾಗಿರುವ ಖ್ಯಾತ ವೈದ್ಯ ಡಾ ದೇವಿಪ್ರಸಾದ್ ಶೆಟ್ಟಿ ನೇತೃತ್ವದ ತಜ್ಞರ ತಂಡ ಈ ಎಚ್ಚರಿಕೆ ನೀಡಿದೆ.
ಬೆಂಗಳೂರಿನಲ್ಲಿಯೇ 40ರಿಂದ 50 ಸಾವಿರ ಮಕ್ಕಳಲ್ಲಿ ಸೋಂಕು ಕಾಣಿಸಿಕೊಳ್ಳಬಹುದು ಎಂದು ತಜ್ಞರು ವಿಶ್ಲೇಷಿಸಿದ್ದಾರೆ.
ದೇಶದಲ್ಲಿ ಕೊರೊನಾ ಸೋಂಕಿನ ಮೂರನೇ ಮೇಲೆ ಮಕ್ಕಳ ಮೇಲೆ ಪರಿಣಾಮ ಬೀರಲಿದೆ ಎನ್ನುವ ಕುರಿತು ತಜ್ಞರಲ್ಲಿ ಭಿನ್ನಾಭಿಪ್ರಾಯ ಇರುವ ಸಂದರ್ಭದಲ್ಲಿ ರಾಜ್ಯದ ತಜ್ಞರ ಸಮಿತಿ ಆಘಾತಕಾರಿ ವರದಿ ಸರ್ಕಾರ ಮತ್ತಷ್ಟು ಮೆನ್ನಚ್ಚರಿಕೆ ಕ್ರಮ ಕೈಗೊಳ್ಳುವಂತೆ ಮಾಡಿದೆ.
ತಜ್ಞರ ಸಮಿತಿ ಸರ್ಕಾರಕ್ಕೆ ನೀಡಿರುವ ಮಧ್ಯಂತರ ವರದಿಯಲ್ಲಿ ಈ ವಿಷಯ ಬಹಿರಂಗ ಪಡಿಸಿದೆ. ಹೀಗಾಗಿ ಆಸ್ಪತ್ರೆಗಳಲ್ಲಿ ಹಾಸಿಗೆ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸುವಂತೆ ಸೂಚಿಸಿದೆ.
ರಾಜಧಾನಿ ಬೆಂಗಳೂರಿನಲ್ಲಿ 18 ವರ್ಷ ವಯೋಮಾನದ ವರೆಗಿನ ಸರಿಸುಮಾರು 32.2 ಒಂದು ಲಕ್ಷ ಮಕ್ಕಳಿದ್ದಾರೆ. ಅಗತ್ಯ ಕ್ರಮ ಕೈಗೊಳ್ಳದೆ ಹೋದಲ್ಲಿ ಮೂರನೇ ಅಲೆಯ ಉತ್ತುಂಗದಲ್ಲಿ ಅಂದಾಜು 45,958 ಮಕ್ಕಳಲ್ಲಿ ಸೋಂಕುಗಳು ಕಂಡುಬರುತ್ತವೆ. ರಾಜ್ಯದಲ್ಲಿ ಸುಮಾರು 2.30 ಕೋಟಿ ಮಕ್ಕಳಿದ್ದಾರೆ. ರಾಜ್ಯದ ಒಟ್ಟು ಜನಸಂಖ್ಯೆಯ ಶೇಕಡಾ 2.2 ರಷ್ಟು ಜನರು ಒಂದೇ ಸಮಯದಲ್ಲಿ ಸೋಂಕಿಗೆ ಒಳಗಾಗುತ್ತಾರೆ ಎಂದು ತಜ್ಞರ ಸಮಿತಿ ಅಂದಾಜಿಸಿದೆ.
ತಜ್ಞರ ತಂಡ ಮುಂದಿನ ಒಂದೂವರೆ ತಿಂಗಳಲ್ಲಿ ಅಂತಿಮ ವರದಿಯನ್ನು ಸಲ್ಲಿಸಲಿದೆ. ಅದರ ಆಧಾರದ ಮೇಲೆ ಮೂರನೇ ಅಲೆ ತಡೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಸಚಿವ ಸುಧಾಕರ್ ತಿಳಿಸಿದ್ದಾರೆ.
ತಾಂತ್ರಿಕ ಸಲಹಾ ಸಮಿತಿ ತಜ್ಞರ ತಂಡ ನೀಡಿರುವ ವರದಿಯನ್ನು ಆಧರಿಸಿ ಅದರ ಮೇಲೆ ಸೋಂಕು ನಿರ್ವಹಣೆ ಕ್ರಮಗಳನ್ನು ಕೈಗೊಳ್ಳಲಾಗುವುದು ಹಾಗೂ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಹೆಚ್ಚು ಮಾಡುವ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ
ಅಗತ್ಯ ಕ್ರಮ ಕೈಗೊಳ್ಳದೆ ಹೋದಲ್ಲಿ ಮೂರನೇ ಅಲೆಯ ಉತ್ತುಂಗದಲ್ಲಿ ಅಂದಾಜು 45,958 ಮಕ್ಕಳಲ್ಲಿ ಸೋಂಕುಗಳು ಕಂಡುಬರುತ್ತವೆ. ರಾಜ್ಯದ ಒಟ್ಟು ಜನಸಂಖ್ಯೆಯ ಶೇಕಡಾ 2.2 ರಷ್ಟು ಜನರು ಒಂದೇ ಸಮಯದಲ್ಲಿ ಸೋಂಕಿಗೆ ಒಳಗಾಗುತ್ತಾರೆ ಎಂದು ತಜ್ಞರ ಸಮಿತಿ ಅಂದಾಜಿಸಿದೆ.

ಪ್ರಮುಖ ಸುದ್ದಿ :-   ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಹೈಡ್ರಾಮಾ : ಎಐಸಿಸಿ ವೀಕ್ಷಕರ ಮುಂದೆಯೇ ಕೈಕೈ ಮಿಲಾಯಿಸಿದ ಕಾರ್ಯಕರ್ತರು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement