ಪರಿಷ್ಕೃತ ಆದೇಶ: ಧಾರವಾಡ ಜಿಲ್ಲೆ ಕೆಟಗರಿ -1ರಲ್ಲಿ ಸೇರ್ಪಡೆ ,ನಾಳೆಯಿಂದ ಬಸ್‌ ಓಡಾಟ, ಎಲ್ಲ ಅಂಗಡಿ ಓಪನ್‌

ಹುಬ್ಬಳ್ಳಿ: ರಾಜ್ಯ ಸರ್ಕಾರ ಕೋವಿಡ್ ಅನ್‌ಲಾಕ್ 2.0 ಕುರಿತು ಹೊರಡಿಸಿದ ಆದೇಶದಲ್ಲಿ ಧಾರವಾಡ ಜಿಲ್ಲೆ ಬಿಟ್ಟು ಹೋಗಿತ್ತು.ಈಗ ಪರಿಷ್ಕೃತ ಆದೇಶದಲ್ಲಿ ಧಾರವಾಡ ಜಿಲ್ಲೆಯನ್ನೂ ಕೆಟಗರಿ -1ರ 16 ಜಿಲ್ಲೆಗಳ ಜೊತೆ ಸೇರ್ಪಡೆ ಮಾಡಲಾಗಿದೆ. ಹೀಗಾಗಿ ಧಾರವಾಡ ಜಿಲ್ಲೆಯಲ್ಲಿಯಲ್ಲಿ 16 ಜಿಲ್ಲೆಗಳ ಮಾರ್ಗಸೂಚಿಗಳೆಲ್ಲ ಅನ್ವಯವಾಗುತ್ತದೆ. ರಾಜ್ಯ ಸರ್ಕಾರ ಜೂನ್‌ 20 ರಂದು ಪರಿಷ್ಕೃತ ಆದೇಶ ಹೊರಡಿಸಿದೆ.
*ಎಲ್ಲ ರೀತಿಯ ಅಂಗಡಿಗಳ ಆರಂಭಕ್ಕೆ ಅನುಮತಿ, ಬೆಳಿಗ್ಗೆ 6ರಿಂದ ಸಂಜೆ 5 ಗಂಟೆ ವರೆಗೆ ಮಾತ್ರ ಅವಕಾಶ, *ಶೇ. 50ರಷ್ಟು ಗ್ರಾಹಕರ ಮಿತಿಯೊಂದಿಗೆ ಹೋಟೆಲ್‌ಗಳು ಹಾಗೂ ರೆಸ್ಟಾರೆಂಟುಗಳಲ್ಲಿ  ಕುಳಿತು  ಆಹಾರ ಸೇವನೆಗೆ ಅವಕಾಶ, ಬೆಳಿಗ್ಗೆ 6ರಿಂದ ಸಂಜೆ 5 ಗಂಟೆ ವರೆಗೆ ಮಾತ್ರ, (ಹವಾನಿಯಂತ್ರಣ ವ್ಯವಸ್ಥೆ ಬಳಸುವಂತಿಲ್ಲ). *ಮಧ್ಯದಂಗಡಿಗಳಲ್ಲಿ ಕೇವಲ ಪಾರ್ಸಲ್ಲುಗಳಿಗಷ್ಟೇ ಅವಕಾಶ,
* ಬಸ್ಸುಗಳಲ್ಲಿ ಶೇಕಡಾ 50ರಷ್ಟು ಪ್ರಯಾಣಿಕರಿಗೆ ಸಂಚಾರಕ್ಕೆ ಅನುಮತಿ. *ಅಗತ್ಯ ವಸ್ತುಗಳ ಖರೀದಿ ಸಂಜೆ 5ರ ವರೆಗೂ ವಿಸ್ತರಣೆ
*ಸರ್ಕಾರಿ ಕಚೇರಿಗಳು  ಹಾಗೂ ಖಾಸಗಿ ಕಚೇರಿಗಳು ಶೇ. 50 ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಣೆ
*ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ.*ಹೊರಾಂಗಣ ಕ್ರೀಡಾ ಚಟುವಟಿಕೆಗಳಿಗೆ ಅವಕಾಶ (ಪ್ರೇಕ್ಷಕರಿಗೆ ಅವಕಾಶವಿಲ್ಲ)
*ಜಿಮ್‌ಗಳಿಗೆ ಶೇ.50ರಷ್ಟು ಸಾಮರ್ಥ್ಯದಲ್ಲಿ ಕಾರ್ಯನಿರ್ವಹಣೆಗೆ ಅವಕಾಶ. *ಲಾಜ್‌ ಹಾಗೂ ರೆಸಾರ್ಟುಗಳಲ್ಲಿ ಶೇ.50ರಷ್ಟು ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲು ಅವಕಾಶ ನಿಡಲಾಗಿದೆ.
ಸಿಎಂ ಜೊತೆ ಚರ್ಚೆ: ಈ ಕುರಿತು ಮುಖ್ಯಮಂತ್ರಿ, ಆರೋಗ್ಯ ಸಚಿವರು ಹಾಗೂ ಸರ್ಕಾರದ ಕಾರ್ಯದರ್ಶಿಯೊಂದಿಗೆ ಚರ್ಚಿಸಿದ್ದೇನೆ. ಧಾರವಾಡ ಜಿಲ್ಲೆಯಲ್ಲಿ 10 ದಿನಗಳ ಕೋವಿಡ್ ಪಾಸಿಟಿವಿಟಿ ಸರಾಸರಿ ದರ ಶೇ.4.5 ರಷ್ಟಿದೆ. ಧಾರವಾಡ ಜಿಲ್ಲೆಗೂ ಅನ್‌ಲಾಕ್ ಆದೇಶ ವಿಸ್ತರಿಸಿ ಸರ್ಕಾರದಿಂದ ಪರಿಷ್ಕೃತ ಆದೇಶ ಹೊರಡಿಸಲಾಗುತ್ತದೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದರು.
ಹುಬ್ಬಳ್ಳಿ ಪ್ರವಾಸಿ ಮಂದಿರದಲ್ಲಿ ಜಿಲ್ಲೆಯಲ್ಲಿನ ಕೋವಿಡ್ ಸ್ಥಿತಿಗತಿ ಹಾಗೂ ಕೋವಿಡ್ ಲಸಿಕಾ ಅಭಿಯಾನದ ಕುರಿತು ಅಧಿಕಾರಿಗಳ ಸಭೆ ನಡೆಸಿ, ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಐ.ಸಿ.ಎಂ.ಆರ್ ವರದಿಯಲ್ಲಿ ಜಿಲ್ಲೆಯ ಪಾಸಿಟಿವಿಟಿ ದರ ಶೇ.5 ಕ್ಕಿಂತಲೂ ಕಡಿಮೆಯಿದೆ. ಆದರೆ ಸ್ಟೇಟ್ ವಾರ್ ರೂಮ್‌ನಿಂದ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಜರುಗಿದ ಸಭೆಗೆ ಧಾರವಾಡ ಜಿಲ್ಲೆಯ ಪಾಸಿಟಿವಿ ದರ ಶೇ.5.7 ರಷ್ಟಿದೆ ಎಂದು ಮಾಹಿತಿ ನೀಡಿದ್ದಾರೆ. ಹಾಗಾಗಿ ಅನ್‌ಲಾಕ್ ಆದೇಶದಲ್ಲಿ ಜಿಲ್ಲೆಯ ಹೆಸರು ಕೈಬಿಡಲಾಗಿತ್ತು ಎಂದು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಜನರು ಲಾಕ್‌ಡೌನ್ ಸಂದರ್ಭದಲ್ಲಿ ಹೆಚ್ಚಿನ ಸಹಕಾರ ನೀಡಿದ್ದಾರೆ. ಹುಬ್ಬಳ್ಳಿ ವ್ಯಾಪಾರ ವಹಿವಾಟಿಗೆ ಹೆಸರಾಗಿದೆ. ಈ ಬಾರಿ ಅನ್‌ಲಾಕ್ ಮಾರ್ಗಸೂಚಿಯಲ್ಲಿ ವ್ಯಾಪಾರ ವಹಿವಾಟಿಗಳಿಗೆ ಸಮಯ ಹೆಚ್ಚಿಸಲಾಗಿದೆ. ಬಿ.ಆರ್.ಟಿ.ಎಸ್ ಸೇರಿದಂತೆ ಅಂತರ್ ಜಿಲ್ಲಾ ಬಸ್ ಓಡಾಟ ಪ್ರಾರಂಭವಾಗವುದು. ಅಂತರಾಜ್ಯ ಬಸ್ ಓಡಾಟಗಳ ಬಗ್ಗೆ ರಾಜ್ಯ ಮಟ್ಟದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ಪ್ರಮುಖ ಸುದ್ದಿ :-   ಮಾರ್ಚ್‌ 31ರೊಳಗೆ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಬದಲಾವಣೆ ಮಾಡಿ : ಬಿಜೆಪಿ ಹೈಕಮಾಂಡಿಗೆ ಮಠಾಧೀಶರ ಗಡುವು

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement