ಬೀದಿಬದಿ ತರಕಾರಿಗಳಿಗೆ ಕಾಲಿನಿಂದ ಒದ್ದು ದರ್ಪ ತೋರಿದ್ದ ಪಿಎಸ್‍ಐ ಅಮಾನತು

ರಾಯಚೂರು: ಹೊಟ್ಟೆ ಪಾಡಿಗಾಗಿ ತರಕಾರಿ ವ್ಯಾಪಾರ ಮಾಡುತ್ತಿದ್ದ ರಾಯಚೂರಿನ ಬೀದಿಬದಿಯ ವ್ಯಾಪಾರಿಗಳ ಮೇಲೆ ದರ್ಪ ತೋರಿಸಿದ್ದ ಪಿಎಸ್‍ಐ ಅವರನ್ನು ಅಮಾನತು ಮಾಡಲಾಗಿದೆ.
ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ನಗರದಲ್ಲಿ ಎಲ್ಲ ವ್ಯಾಪಾರ ವಹಿವಾಟುಗಳನ್ನು ಬಂದ್ ಮಾಡಲಾಗಿತ್ತು. ನಗರದ ಚಂದ್ರಮೌಳೇಶ್ವರ ವೃತ್ತದ ಬಳಿ ವ್ಯಾಪಾರ ನಡೆಸುತ್ತಿದ್ದ, ತರಕಾರಿ ವ್ಯಾಪಾರಿಗಳನ್ನ ಪೊಲೀಸರು ತೆರವು ಮಾಡಿಸುತ್ತಿದ್ದರು. ಆಗ ಏಕಾಏಕಿ ಬಂದ ಪಿಎಸ್‍ಐ ಅಝಂ ತರಕಾರಿ ಹಾಗೂ ಸೊಪ್ಪನ್ನು ಕಾಲಿನಿಂದ ಒದ್ದು ದರ್ಪ ತೋರಿದ್ದರು. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿತ್ತು. ನಂತರ ಕಾಲಿನಿಂದ ಒದೆಯುತ್ತಿದ್ದ ಫೋಟೋ ಹರಿದಾಡಿತ್ತು. ಇದಕ್ಕೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದರು.

ಜವಾಬ್ದಾರಿಯುತ ಅಧಿಕಾರಿಯಾಗಿ ಅಸಭ್ಯ ವರ್ತನೆ ತೋರಿದ ಅಝಂ ಅವರನ್ನು ರಾಯಚೂರು ಜಿಲ್ಲಾ ಪೊಲೀಸ್ ಅಧೀಕ್ಷಕ ಪ್ರಕಾಶ್ ನಿಕಮ್ ಅಮಾನತುಗೊಳಿಸಿ ಆದೇಶಿಸಿದ್ದಾರೆ.

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವಿಧಾನಸೌಧ ಸ್ಫೋಟದ ಎಐ ವಿಡಿಯೊ ಸೃಷ್ಟಿಸಿ ಹಂಚಿಕೊಂಡ ಆರೋಪ : ಕಿಡಿಗೇಡಿ ಬಂಧನ

ನಿಮ್ಮ ಕಾಮೆಂಟ್ ಬರೆಯಿರಿ

advertisement