ಯುರೋಪಿಯನ್ ವಿವಿ ಪ್ರತಿಷ್ಠಿತ ಪ್ರಶಸ್ತಿ ಪಡೆದ ಕೇರಳದ ಮಾಜಿ ಸಚಿವೆ ಶೈಲಜಾ ಟೀಚರ್‌

ತಿರುವನಂತಪುರಂ:ಕೇರಳದ ಮಾಜಿ ಆರೋಗ್ಯ ಸಚಿವೆ ಕೆ. ಕೆ. ಶೈಲಜಾ (ಶೈಲಜಾ ಟೀಚರ್‌) ಪ್ರತಿಷ್ಠಿತ ಕೇಂದ್ರ ಯುರೋಪಿಯನ್ ವಿಶ್ವವಿದ್ಯಾಲಯ ನೀಡುವ ಓಪನ್ ಸೊಸೈಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಸಾರ್ವಜನಿಕ ಆರೋಗ್ಯ ವಲಯದಲ್ಲಿನ ಅವರ ಸೇವಾ ಬದ್ಧತೆ ಗಮನದಲ್ಲಿ ಇಟ್ಟುಕೊಂಡು ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಪ್ರತಿವರ್ಷ ಭಿನ್ನ ರೀತಿಯಲ್ಲಿ ಸಮಾಜಮುಖಿ ಕಾರ್ಯಗಳನ್ನು ಮಾಡಿದ ವ್ಯಕ್ತಿಗಳನ್ನು ಗುರುತಿಸಿ ಓಪನ್ ಸೊಸೈಟಿ ಪ್ರಶಸ್ತಿ ನೀಡಲಾಗುತ್ತದೆ. ಇತ್ತೀಚೆಗೆ ಆನ್‌ಲೈನ್‌ನಲ್ಲಿ ನಡೆದ 30ನೇ ಪದವಿ ಪ್ರದಾನ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಘೋಷಿಸಲಾಯಿತು.
ಕೇಂದ್ರ ಯುರೋಪಿಯನ್ ವಿಶ್ವವಿದ್ಯಾಲಯದ ಅಧ್ಯಕ್ಷ ಮೈಕಲ್ ಇಗ್ನಾಟೀಫ್ ಈ ಪ್ರಶಸ್ತಿಯನ್ನು ಪ್ರಕಟಿಸಿದರು. “ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ “ಅಸಾಧಾರಣ ಸಾರ್ವಜನಿಕ ಸೇವೆ”ಯನ್ನು ಪರಿಗಣಿಸಿ ಈ ವರ್ಷ “ಶೈಲಾಜಾ ಟೀಚರ್” ಅವರಿಗೆ ಪ್ರಶಸ್ತಿ ನೀಡಲಾಗುತ್ತದೆ,” ಎಂದು ಹೇಳಿದರು.
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಸಂದರ್ಭದಲ್ಲಿ ಕೇರಳದ ಸಾರ್ವಜನಿಕ ಆರೋಗ್ಯ ಸಚಿವರಾಗಿದ್ದ ಕೆ.ಕೆ.ಶೈಲಜಾ ಟೀಚರ್ ನಾಯಕತ್ವ ಮತ್ತು ಸಾರ್ವಜನಿಕ ಆರೋಗ್ಯ ಸೇವಾ ಸಿಬ್ಬಂದಿಯ ಪ್ರಾಮಾಣಿಕ ಪ್ರಯತ್ನ ಹಾಗೂ ಬದ್ಧತೆಯನ್ನು ಇಡೀ ಜಗತ್ತು ನೋಡಿದೆ. ಸಾಮುದಾಯಿಕ ಮಟ್ಟದಲ್ಲಿ ಆರೋಗ್ಯ ಹಾಗೂ ಪರಿಣಾಮಕಾರಿ ಸಂವಹನದಿಂದ ಅದೆಷ್ಟೋ ಜೀವಗಳನ್ನು ರಕ್ಷಿಸಲಾಗಿದೆ,” ಎಂದು ಇಗ್ನಟೀಫ್ ಹೇಳಿದ್ದಾರೆ.
ಶೈಲಜಾ ಅವರನ್ನು ಎಲ್ಲರೂ ಪ್ರೀತಿಯಿಂದ ಟೀಚರ್ ಎಂದು ಕರೆಯುತ್ತಾರೆ. 1994ರಲ್ಲಿ ಮೊದಲ ಬಾರಿಗೆ ತತ್ವಜ್ಞಾನಿ ಸರ್ ಕಾರ್ಲ್ ಪಾಪ್ಪರ್ ರಿಗೆ ಓಪನ್ ಸೊಸೈಟಿ ಪ್ರಶಸ್ತಿ ನೀಡಲಾಯಿತು. ಅವರ ‘ದಿ ಓಪನ್ ಸೊಸೈಟಿ ಅಂಡ್ ಇಟ್ಸ್ ಎನಿಮೀಸ್(1945)’ ಪುಸ್ತಕದಲ್ಲಿ ಸಹಿಷ್ಣುತೆ, ಮುಕ್ತತೆ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳ ತತ್ವಶಾಸ್ತ್ರವನ್ನು ಪ್ರಸ್ತುತಪಡಿಸಲಾಗಿತ್ತು.
ಈ ಹಿಂದೆ ಅಮೇರಿಕನ್ ಅರ್ಥಶಾಸ್ತ್ರಜ್ಞ ಮತ್ತು ನೊಬೆಲ್ ಪ್ರಶಸ್ತಿ ಪುರಸ್ಕೃತ ಜೋಸೆಫ್ ಸ್ಟಿಗ್ಲಿಟ್ಜ್, ಬೆಲರೂಸಿಯನ್ ಪತ್ರಕರ್ತ ಮತ್ತು ನೊಬೆಲ್ ಪ್ರಶಸ್ತಿ ಪುರಸ್ಕೃತ ಸ್ವೆಟ್ಲಾನಾ ಅಲೆಕ್ಸಿವಿಚ್, ಅಂತರರಾಷ್ಟ್ರೀಯ ಹಣಕಾಸು ನಿಧಿಯ ವ್ಯವಸ್ಥಾಪಕ ನಿರ್ದೇಶಕ ಕ್ರಿಸ್ಟಲಿನಾ ಜಾರ್ಜೀವಾ, ವಿಶ್ವಸಂಸ್ಥೆಯ ಮಾಜಿ ಪ್ರಧಾನ ಕಾರ್ಯದರ್ಶಿ ಕೋಫಿ ಅನ್ನನ್ ಪ್ರಶಸ್ತಿ ಪಡೆದಿದ್ದಾರೆ.

ಪ್ರಮುಖ ಸುದ್ದಿ :-   100 ವರ್ಷಗಳಲ್ಲಿ ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮೊದಲ ಮಹಿಳಾ ಉಪಕುಲಪತಿ ನೇಮಕ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement