ಕರ್ನಾಟಕದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಗಣನೀಯ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 4867 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿವೆ. ಇದೇ ಸಮಯದಲ್ಲಿ 142 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
8404 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಹೆಲ್ತ್‌ ಬುಲೆಟಿನ್‌ ತಿಳಿಸಿದೆ.
ಸೋಮವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 28,11,320ಕ್ಕೆ ಏರಿಕೆಯಾಗಿದೆ. ಈವರೆಗೂ 26,54,139 ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 1,23,134 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ. ರಾಜ್ಯ ರಾಜಧಾನಿಯಲ್ಲಿ 1034 ಪ್ರಕರಣಗಳು ಪತ್ತೆಯಾಗಿವೆ.
ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

21-06-2021 HMB Kannada

5 / 5. 1

ಶೇರ್ ಮಾಡಿ :
ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

ನಿಮ್ಮ ಕಾಮೆಂಟ್ ಬರೆಯಿರಿ

advertisement