ಲಾರಿಯಲ್ಲಿ ಸಾಗಿಸುತ್ತಿದ್ದ 15 ಕೋಟಿ ರೂ. ಮೌಲ್ಯದ ಗಾಂಜಾ ವಶ

ಡ್ರಗ್ಸ್ ಸರಬರಾಜು ಹಾಗೂ ಮಾರಾಟದ ವಿರುದ್ಧದ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ರಾಷ್ಟ್ರೀಯ ತನಿಖಾದಳ(ಎನ್‌ಸಿಬಿ) ಅಧಿಕಾರಿಗಳು ಮಹಾರಾಷ್ಟ್ರದ ಪುಣೆಗೆ ಟ್ರಕ್ ನಲ್ಲಿ ಬಾಕ್ಸ್ ಗಳಲ್ಲಿ ಸಾಗಿಸುತ್ತಿದ್ದ ಅಂದಾಜು 15 ಕೋಟಿ ರೂ ಮೌಲ್ಯದ ಗಾಂಜಾ ವಶಪಡಿಸಿಕೊಂಡಿದ್ದು, ಈ ಸಂಬಂಧ ಮಹಾರಾಷ್ಟ್ರದ ಮೂಲದ ನಾಲ್ವರನ್ನು ಬಂಧಿಸಲಾಗಿದೆ.
ಎರಡು ಸಾವಿರ ಕೆ.ಜಿ.ಗಾಂಜಾವನ್ನು ಸಾಗಿಸುತ್ತಿದ್ದ ಮಹಾರಾಷ್ಟ್ರ ಮೂಲದ ಕೆ. ಕಾಳೆ, ಎಸ್. ಕಾಳೆ, ಸಿ. ಕಾಳೆ ಹಾಗೂ ಬಿ. ಧೋರಲ್ಕರ್ ಎಂಬುವರನ್ನು ಬಂಧಿಸಲಾಗಿದೆ. ಲಅರಿಯನ್ನು ಸಹ ವಶಪಡಿಸಿಕೊಳ್ಳಲಾಗಿದ್ದು ತನಿಖೆ ಮುಂದುವರಿದಿದೆ.
ಖಚಿತ ಮಾಹಿತಿ ಆಧರಿಸಿ ಬೆಂಗಳೂರಿನ ಎನ್ ಸಿಬಿ ಅಧಿಕಾರಿಗಳು ಹೈದರಾಬಾದ್ ನ ಪೆದ್ದ ಅಮೀರ್ ಪೇಟ್ ಟೋಲ್ ಪ್ಲಾಜಾ ಬಳಿ ಕಾರ್ಯಾಚರಣೆ ನಡೆಸಿದಾಗ ಜಾಲ ಪತ್ತೆಯಾಗಿದೆ.
ಒಡಿಶಾ ಗಡಿ ಭಾಗದಿಂದ ಪುಣೆಗೆ ಲಾರಿಯಲ್ಲಿ ಗಾಂಜಾ ಸಾಗಣೆ ಮಾಡಲಾಗುತ್ತಿತ್ತು.ಎರಡು ಕೆ.ಜಿ. ತೂಕದ ಸುಮಾರು 1080 ಪಾಕೆಟ್ ಗಾಂಜಾ ಪೊಟ್ಟಣಗಳನ್ನು ಗೂಡ್ಸ್ ಲಾರಿಯಲ್ಲಿ ಸಾಗಣೆ ಮಾಡಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಪೆದ್ದ ಅಮೀರ್ ಪೇಟ್ ಟೋಲ್ ಬಳಿ ಎನ್ ಸಿಬಿ ಅಧಿಕಾರಿಗಳು ದಾಳಿ ನಡೆಸಿ ಗಾಂಜಾ ಸಾಗಿಸುತ್ತಿದ್ದ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರಿಂದ ಹದಿನೈದು ಕೋಟಿ ಮೌಲ್ಯದ ಎರಡು ಸಾವಿರ ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಇತ್ತೀಚಿನ ದಿನಗಳಲ್ಲಿ ನಡೆದ ಅತಿದೊಡ್ಡ ಕಾರ್ಯಾಚರಣೆ ಇದಾಗಿದ್ದು ಬಂಧಿತ ಆರೋಪಿಗಳು ಹಲವು ದಿನಗಳಿಂದ ಗಾಂಜಾ ಸಾಗಣೆ ಮಾಡುತ್ತಿರುವುದಾಗಿ ಬಾಯ್ಬಿಟ್ಟಿದ್ದಾರೆ ಎಂದು ಹೇಳಲಾಗಿದೆ.

ಪ್ರಮುಖ ಸುದ್ದಿ :-   ಬಿಹಾರದಲ್ಲಿ ಮತಪಟ್ಟಿ ಪರಿಷ್ಕರಣೆ ; ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ ಆರ್‌ಜೆಡಿ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement