ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಮಹತ್ವದ ಸೂಚನೆ…ಪರೀಕ್ಷಾ ಕೇಂದ್ರ ಆಯ್ಕೆಗೆ ವಿದ್ಯಾರ್ಥಿಗಳಿಗೆ ಅವಕಾಶ ನೀಡಿದ ಮಂಡಳಿ

posted in: ರಾಜ್ಯ | 0

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಎಸ್​ಎಸ್​ಎಲ್​ಸಿ ಪರೀಕ್ಷಾ ಕೇಂದ್ರಗಳ ಆಯ್ಕೆಗೆ ವಿದ್ಯಾರ್ಥಿಗಳಿಗೆ ಅವಕಾಶ ನೀಡಿದೆ.
ಸರ್ಕಾರಿ, ಅನುದಾನಿತ ಶಾಲೆ, ಖಾಸಗಿ ಶಾಲೆ ಮುಖ್ಯಸ್ಥರು ತಮ್ಮ ಶಾಲೆಯ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳನ್ನು ಸಂಪರ್ಕಿಸಬೇಕು. ಈ ಪೈಕಿ ವಲಸೆ ಕಾರ್ಮಿಕರ ಮಕ್ಕಳನ್ನೂ ಸಂಪರ್ಕಿಸಬೇಕು ಎಂದು ಸೂಚಿಸಲಾಗಿದೆ.

(ಸುತ್ತೋಲೆಯನ್ನು ಪಿಡಿಎಫ್‌ನಲ್ಲಿ ಕೊಡಲಾಗಿದೆ.)

SSLC_Main_Exam_2021_Mirgation_Circular

ವಲಸೆ ಶಾಲೆಗಳು, ಹಾಸ್ಟೆಲ್ ವಿದ್ಯಾರ್ಥಿಗಳನ್ನು ಸಂರ್ಪಿಸಿದ ವೇಳೆ ಮೂಲ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯುವ ಬದಲಾಗಿ ಪ್ರಸ್ತುತ ವಾಸವಿರುವ ಜಿಲ್ಲೆ, ತಾಲೂಕಿನ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಇಚ್ಛಿಸಿದರೆ ಅವಕಾಶ ನೀಡಲಾಗುತ್ತದೆ. ಈ ಅಂಶವನ್ನು ಶಾಲಾ ಲಾಗಿನ್​ನಲ್ಲಿ ನಮೂದಿಸಬೇಕೆಂದು ಮಂಡಳಿ ಸೂಚನೆ ನೀಡಿದೆ.
ಒಂದುವೇಳೆ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಇಚ್ಛಿಸುವ ವಿದ್ಯಾರ್ಥಿಗಳ ವಿವರ, ಪರೀಕ್ಷಾ ಕೇಂದ್ರಗಳನ್ನು ಶಾಲಾ ಲಾಗಿನ್​ನಲ್ಲಿ ವೆಬ್​​ಸೈಟ್ sslc.karnataka.gov.inನಲ್ಲಿ ದಾಖಲಿಸಬೇಕು. ಈಗಾಗಲೇ ಈಗಾಗಲೇ ಪ್ರವೇಶಪತ್ರ ಡೌನ್​ಲೋಡ್​ ಮಾಡಿಕೊಂಡಿರುವ ತಂತ್ರಾಂಶದ ಯೂಸರ್​ ನೇಮ್, ಪಾಸ್​ವರ್ಡ್​ ಬಳಸಿ ಪರೀಕ್ಷಾ ಕೇಂದ್ರ ಬದಲಾವಣೆ ಬಗ್ಗೆ ಮಾಹಿತಿ ಅಪ್​ಲೋಡ್​ ಮಾಡಬೇಕು ಎಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಸೂಚನೆ ನೀಡಿದೆ.
ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅವಕಾಶ ಕೋರಿದ ಪರೀಕ್ಷಾ ಕೇಂದ್ರದಲ್ಲಿ ಆಸನದ ವ್ಯವಸ್ಥೆ ಇಲ್ಲದಿದ್ದರೆ ಬೇರೆ ಪರೀಕ್ಷಾ ಕೇಂದ್ರ ಬಳಸಲು ಬೋರ್ಡ್ ಸೂಚಿಸಿದೆ. ಒಮ್ಮೆ ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಂಡ ಮೇಲೆ ಬದಲಿಸಲು ಅವಕಾಶ ಇರುವುದಿಲ್ಲ ಎಂದೂ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಸುತ್ತೋಲೆಯು ತಿಳಿಸಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ