ಪ್ರಶಾಂತ ಕಿಶೋರ್ ಭೇಟಿ ನಂತರ ಇಂದು ಪ್ರತಿಪಕ್ಷಗಳ ನಾಯಕರ ಸಭೆ ಕರೆದ ಶರದ್‌ ಪವಾರ: ರಾಜಕಾರಣದಲ್ಲಿ ಸಂಚಲನ

ಬೆಂಗಳೂರು: ಎನ್​ಸಿಪಿ ಮುಖ್ಯಸ್ಥ ಹಾಗೂ ಕೇಂದ್ರದ ಮಾಜಿ ಸಚಿವ ಶರದ್​ ಪವಾರ್ ಇಂದು (ಜೂನ್ 22ರಂದು) ವಿವಿಧ ರಾಜಕೀಯ ಪಕ್ಷಗಳ ನಾಯಕರ ಸಭೆ ಕರೆದಿದ್ದಾರೆ.
ಈ ಸಭೆಯಲ್ಲಿ ದೇಶದ ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಲಾಗುವುದು ಎಂದು ಮಹಾರಾಷ್ಟ್ರ ಸರ್ಕಾರದ ನವಾಬ್ ಮಲಿಕ್ ಟ್ವೀಟ್ ಮೂಲಕ ತಿಳಿಸಿದ್ದಾರೆ. ಈ ತಿಂಗಳಲ್ಲಿ ಶರದ್​ ಪವಾರ್​ 2ನೇ ಬಾರಿಗೆ ಚುನಾವಣಾ ಕಾರ್ಯತಂತ್ರ ನಿಪುಣ ಪ್ರಶಾಂತ ಕಿಶೋರ್ ಅವರನ್ನು ಭೇಟಿಯಾದ ನಂತರ ಈ ಬೆಳವಣಿಗೆ ನಡೆದಿದೆ. ಎನ್​ಸಿಪಿ ನಾಯಕ ಶರದ್​ ಪವಾರ್ ತಮ್ಮ ದೆಹಲಿ ನಿವಾಸದಲ್ಲಿ ಪ್ರಶಾಂತ್ ಕಿಶೋರ್ ಅವರನ್ನು ಭೇಟಿಯಾಗಿ ಸುಮಾರು 2 ತಾಸು ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದರು. ಬಿಜೆಪಿ ವಿರುದ್ಧ ತೃತೀಯ ರಂಗ ಕಟ್ಟುವ ಸಾಧ್ಯತೆಗಳ ಬಗ್ಗೆ ಮತ್ತೆ ಚರ್ಚೆಗಳು ಮತ್ತೆ ಆರಂಭವಾಗಿದೆ.
ದೆಹಲಿಯ ತಮ್ಮ ನಿವಾಸದಲ್ಲಿ ಜೂನ್ 22ರ ರಂದು ಸಂಜೆ 4ಕ್ಕೆ ಸಭೆ ನಡೆಯಲಿದೆ ಎಂದು ಪತ್ರಿಕಾ ಹೇಳಿಕೆಯ ಮೂಲಕ ತಿಳಿಸಲಾಗಿದೆ.
ಸಭೆಯಲ್ಲಿ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರುಕ್ ಅಬ್ದುಲ್ಲಾ, ಟಿಎಂಸಿ ನಾಯಕ ಯಶವಂತ ಸಿನ್ಹಾ, ಆಮ್ ಆದ್ಮಿ ಪಕ್ಷದ ಸಂಜಯ್ ಸಿಂಗ್ ಮತ್ತು ಸಿಪಿಐನ ಡಿ.ರಾಜಾ ಮತ್ತು ಸಂಜಯ್ ಝಾ ಅವರಿಗೆ ಆಹ್ವಾನ ನೀಡಲಾಗಿದೆ ಎಂದು ಮಲಿಕ್ ಹೇಳಿದ್ದಾರೆ.
ರಾಜಕಾರಿಣಿಗಳ ಜೊತೆಗೆ ವಿವಿಧ ಕ್ಷೇತ್ರಗಳ ಪ್ರಭಾವಿ ನಾಯಕರನ್ನೂ ಸಭೆಗೆ ಆಹ್ವಾನಿಸಲಾಗಿದೆ. ಹಿರಿಯ ವಕೀಲರಾದ ಕೆ.ಟಿ.ಎಸ್.ತುಳಸಿ, ಕೊಲಿನ್ ಗಾನ್ಸಾಲ್ವೆಸ್, ಮಾಜಿ ಚುನಾವಣಾ ಆಯುಕ್ತ ಎಸ್.ವೈ.ಖುರೇಶಿ, ಮಾಜಿ ರಾಜತಂತ್ರಜ್ಞ ಕೆ.ಸಿ.ಸಿಂಗ್, ಗೀತರಚನೆಕಾರ ಜಾವೇದ್ ಅಖ್ತರ್, ಫಿಲಂ ಮೇಕರ್​ ಪ್ರೀತೀಶ್ ನಂದಿ, ಪತ್ರಕರ್ತರಾದ ಕರಣ್ ಥಾಪರ್ ಮತ್ತು ಆಶುತೋಷ್ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ಬಿಜೆಪಿಯ ಮಾಜಿ ನಾಯಕ ಯಶವಂತ ಸಿನ್ಹಾ ಸಹ ಶರದ್​ ಪವಾರ್ ಸಭೆ ಕರೆದಿರುವ ಬಗ್ಗೆ ಟ್ವೀಟ್ ಮಾಡಿದ್ದರು.
ಚುನಾವಣಾ ಕಾರ್ಯತಂತ್ರಜ್ಞ ಪ್ರಶಾಂತ್ ಕಿಶೋರ ಅವರೊಂದಿಗಿನ ಸಭೆಯ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮಲಿಕ್, ವಿರೋಧ ಪಕ್ಷಗಳ ಎಲ್ಲ ನಾಯಕರನ್ನೂ ಒಗ್ಗೂಡಿಸಲು ಶರದ್​ ಪವಾರ ಪ್ರಯತ್ನಿಸುತ್ತಿದ್ದಾರೆ. ಈ ಸಾಧ್ಯತೆಗಳ ಬಗ್ಗೆ ಅವರಿಬ್ಬರೂ ಚರ್ಚಿಸಿರಬಹುದು. ದೆಹಲಿಯಲ್ಲಿ ಜೂನ್ 22ರಂದು ನಡೆಯಲಿದೆ ಎಂದು ತಿಳಿಸಿದ್ದಾರೆ..
ಭೇಟಿಯ ಕುರಿತು ಈ ಮೊದಲು ಪ್ರತಿಕ್ರಿಯಿಸಿದ್ದ ಚುನಾವಣಾ ಕಾರ್ಯತಂತ್ರಜ್ಞ ಪ್ರಶಾಂತ್ ಕಿಶೋರ್, ‘ಇದೊಂದು ಸೌಹಾರ್ದ ಭೇಟಿ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದ್ದವರನ್ನು ಭೇಟಿಯಾಗಿ ಧನ್ಯವಾದ ಹೇಳಿದೆ’ ಎಂದು ಹೇಳಿದ್ದರು.

ಪ್ರಮುಖ ಸುದ್ದಿ :-   ಇವಿಎಂ ಮತಗಳ ಜೊತೆ ವಿವಿಪ್ಯಾಟ್ ಮತಗಳ ಸಂಪೂರ್ಣ ಎಣಿಕೆ : ಎಲ್ಲ ಅರ್ಜಿಗಳನ್ನು ವಜಾ ಮಾಡಿದ ಸುಪ್ರೀಂ ಕೋರ್ಟ್

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement