ಕರ್ನಾಟಕದಲ್ಲಿ ಮತ್ತಷ್ಟು ಇಳಿಕೆಕಂಡ ದೈನಂದಿನ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮತ್ತಷ್ಟು ಇಳಿಕೆ ಕಂಡಿದ್ದು, ಕಳೆದ 24 ತಾಸಿನಲ್ಲಿ 3709 ಜನರಿಗೆ ಹೊಸದಾಗಿ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 28,15,029 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿಂದು 139 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇದುವರೆಗೆ 34,164 ಸೋಂಕಿತರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇದೇ ಸಮಯದಲ್ಲಿ 8,111 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 26,62,250 ಮಂದಿ ಚೇತರಿಸಿಕೊಂಡು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 1,18,592 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಕಡ 2.87 ರಷ್ಟು ಇದೆ.
ರಾಜಧಾನಿ ಬೆಂಗಳೂರಿನಲ್ಲಿ 803 ಜನರಿಗೆ ಸೋಂಕು ತಗುಲಿದ್ದು, 26 ಮಂದಿ ಮೃತಪಟ್ಟಿದ್ದಾರೆ. 1745 ಮಂದಿ ಚೇತರಿಸಿಕೊಂಡು ಬಿಡುಗಡೆಯಾಗಿದ್ದು, 69,344 ಸಕ್ರಿಯ ಪ್ರಕರಣಗಳು ಇವೆ.
ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

22-06-2021 HMB Kannada

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement