ಮಹತ್ವದ ಸುದ್ದಿ.. ಶಾಲಾ-ಕಾಲೇಜು ಯಾವಾಗ ಆರಂಭ..?: ಮಾತನಾಡಿದ ಸಿಎಂ ಬಿಎಎಸ್‌ವೈ

ಬೆಂಗಳೂರು: ಕರ್ನಾಟದಲ್ಲಿ ಸದ್ಯಕ್ಕೆ 10ನೇ ತರಗತಿಯ ವರೆಗೆ ಶಾಲೆ ಆರಂಭಿಸುವ ಬಗ್ಗೆ ಯಾವುದೇ ಚರ್ಚೆ ನಡೆಸಿಲ್ಲ.ರಾಜ್ಯದಲ್ಲಿ ಸದ್ಯಕ್ಕೆ ಕಾಲೇಜುಗಳನ್ನು ಮಾತ್ರ ಆರಂಭಿಸಲು ಚಿಂತನೆ ನಡೆಸಲಾಗಿದ್ದು, 18 ವರ್ಷಕ್ಕೆ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ನೀಡಿದ ನಂತರ ಕಾಲೇಜುಗಳು ಆರಂಭವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.
ಡಾ.ದೇವಿ ಪ್ರಸಾದ ಶೆಟ್ಟಿ ನೇತೃತ್ವದ ತಜ್ಞರ ಸಮಿತಿ ವರದಿ ಸಭೆಯ ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಂತ ಹಂತವಾಗಿ ಶಾಲೆ- ಕಾಲೇಜು ತೆರೆಯಲು ತಜ್ಞರ ಸಮಿತಿ ಸಲಹೆ ನೀಡಿದೆ. ಕೊವಿಡ್ ನಂತರ ಆರೊಗ್ಯ ಸಮಸ್ಯೆ ಕಡೆಗೆ ಗಮನ ಹರಿಸಬೇಕು. 18 ವರ್ಷಕ್ಕಿಂತ ಹಿರಿಯ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿಸಿದ ನಂತರ ಹಂತ ಹಂತವಾಗಿ ಕಾಲೇಜು ತೆರೆಯಲು ತಜ್ಞರ ಸಮಿತಿ ಸಲಹೆ ನೀಡಿದೆ ಎಂದು ತಿಳಿಸಿದರು.
ಆದರೆ 18 ವರ್ಷದ ಕೆಳಿಗನ ಮಕ್ಕಳಿಗೆ ಲಸಿಕೆ ಬಾರದಿರುವುದರಿಂದ 10ನೇ ತರಗತಿ ವರೆಗೆ ಶಾಲೆ ಆರಂಭಿಸುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ತಜ್ಞರ ಸಮಿತಿ ಅನೇಕ ಸಲಹೆಗಳನ್ನು ನೀಡಿದೆ. 3ನೇ ಅಲೆ ಮಕ್ಕಳಿಗೆ ಹೆಚ್ಚಾಗಿ ಕಾಡುವ ಸಾಧ್ಯತೆ ಇರುವುದರಿಂದ ಈ ಬಗ್ಗೆ ಸಾಕಷ್ಟು ಮುನ್ನೆಚ್ಚರಿಕೆ ವಹಿಸುವಂತೆ ಸಲಹೆ ನೀಡಿದೆ. ಮಕ್ಕಳ ತೀವ್ರ ನಿಗಾ ಘಟಕ, ಮಕ್ಕಳ ಆಸ್ಪತ್ರೆ ಸ್ಥಾಪನೆ ಕುರಿತು ಸಲಹೆ ನೀಡಿದೆ. ಪರಿಣಿತರ ಸಲಹೆ ಪಡೆದು ಇನ್ನಷ್ಟು ಕ್ರಮ ಕೈಗೊಳ್ಳುವಂತೆ ಹೇಳಿದೆ. ವೈದ್ಯಕೀಯ ಸಂಘಟನೆಗಳ, ಕಾರ್ಪೋರೇಟ್ ಸಂಸ್ಥೆಗಳ, ಸಾರ್ವಜನಿಕರ ಸಹಯೋಗ ಪಡೆಯುವಂತೆ ತಿಳಿಸಿದೆ. ಅಪೌಷ್ಠಿಕತೆ ನಿವಾರಣೆ ಮತ್ತು ಆಸ್ಪತ್ರೆಗಳಿಗೆ ಮನೋವೈದ್ಯರ ಸೇವೆ ಪಡೆಯಲು ಸಹ ಸಲಹೆ ನೀಡಿದೆ ಎಂದು ತಿಳಿಸಿದರು.
ಈಗ ಸರ್ಕಾರ ಈವರೆಗೆ ತೆಗೆದುಕೊಂಡಿರುವ ಕ್ರಮಗಳು ಸರಿಯಾಗಿವೆ ಎಂದು ಸಮಿತಿ ಹೇಳಿದೆ. ಹಂತ ಹಂತವಾಗಿ ಕಾಲೇಜುಗಳನ್ನು ಆರಂಭಿಸುವಂತೆ ತಿಳಿಸಿದೆ. 18 ವರ್ಷ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ಹಾಕಿಸಿ ಕಾಲೇಜು ಆರಂಭಿಸಬಹುದು. ವ್ಯಾಕ್ಸಿನೇಶನ್ ಆದ ನಂತರ ಶಾಲಾ, ಕಾಲೇಜು ಆರಂಭಿಸಬಹುದು. ಲಸಿಕೆ ಅಭಿಯಾನ ಇನ್ನಷ್ಟು ತೀವ್ರಗೊಳ್ಳಬೇಕು ಎಂದು ಸಲಹೆ ನೀಡಿದೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ವೀಡಿಯೊ...| ಎಲ್ಲರೆದುರು ಸರ್ಪಕ್ಕೆ ಮುತ್ತಿಕ್ಕಿದ ಭೂಪ...ಆದ್ರೆ ನಂತರ ಆದದ್ದೇ ಬೇರೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement