ಗುಡ್‌ನ್ಯೂಸ್‌…ಮೋಟಾರು ವಾಹನಗಳ ಮೇಲೆ ಶೇ.50ರಷ್ಟು ತೆರಿಗೆ ವಿನಾಯ್ತಿ

ಬೆಂಗಳೂರು: ಕೊರೊನಾ 2ನೇ ಅಲೆಯ ಹಿನ್ನೆಲೆಯಲ್ಲಿ ಮೋಟಾರು ವಾಹನಗಳಿಗೆ ಶೇ.50ರಷ್ಟು ತೆರಿಗೆ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಈ ಕುರಿತು ಆದೇಶ ಹೊರಡಿಸಲಾಗಿದೆ ಎಂದು ಸಾರಿಗೆ ಸಚಿವರೂ ಆಗಿರುವ ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಈ ಕುರಿತು ಪ್ರಕರಣೆ ಬಿಡುಗಡೆ ಮಾಡಿರುವ ಅವರು, ಕೋವಿಡ್ ಹಿನ್ನೆಲೆಯಲ್ಲಿ ಪ್ರಯಾಣಿಕ ವಾಹನ ಸಂಚಾರಕ್ಕೆ ನಿರ್ಬಂಧಗಳನ್ನು ವಿಧಿಸಿ ಆದೇಶಿಸಿದೆ. ಹೀಗಾಗಿ ಇದೊಂದು ವಿಶೇಷ ಪ್ರಕರಣವೆಂದು ಪರಿಗಣಿಸಿ ಕರ್ನಾಟಕ ಮೋಟಾರು ವಾಹನ ತೆರಿಗೆ ಕಾಯ್ದೆ 1957 ರ ಕಲಂ 16(1) ರನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ ರಾಜ್ಯದಲ್ಲಿ ನೊಂದಾಯಿಸಿರುವ (ಹೊಸ ವಾಹನಗಳ ನೋಂದಣಿಯನ್ನು ಹೊರತುಪಡಿಸಿ) ಎಲ್ಲ ಸಾರಿಗೆ ಪ್ರಯಾಣಿಕ ವಾಹನಗಳಿಗೆ ಮಾತ್ರ ಅನ್ವಯಿಸುವಂತೆ ಜೂನ್ 2021ರ ಮಾಹೆಗೆ ಪಾವತಿಸಬೇಕಾಗಿರುವ ಮೋಟಾರು ವಾಹನ ತೆರಿಗೆಯ ಶೇಕಡ 50 ರಷ್ಟಕ್ಕೆ ವಿನಾಯಿತಿ ನೀಡಲಾಗಿದೆ ಎಂದು ಸಾರಿಗೆ ಸಚಿವರು ತಿಳಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement