ತಿರುನ್ವೇಲಿ: ಸಿಮೆಂಟ್ ಕಾರ್ಖಾನೆಯಲ್ಲಿ ಪೈಪ್ ಬಾಂಬ್‍ಗಳು ಪತ್ತೆ..!

ತಿರುನ್ವೇಲಿ: ತಮಿಳುನಾಡಿನ ಖಾಸಗಿ ಸಿಮೆಂಟ್ ಫ್ಯಾಕ್ಟರಿಯಲ್ಲಿ ಹುದುಗಿಸಿಡಲಾಗಿದ್ದ ಎರಡು ಪೈಪ್ ಬಾಂಬ್‍ಗಳನ್ನು ಪೊಲೀಸರು ನಿಷ್ಕ್ರಿಯಗೊಳಿಸಿದ್ದಾರೆ.
ತಮಿಳುನಾಡಿನ ತಿರುನನ್ವೇಲಿಯ ಶಂಕರನಗರದಲ್ಲಿರುವ ಖಾಸಗಿ ಸಿಮೆಂಟ್ ಫ್ಯಾಕ್ಟರಿಯಲ್ಲಿ ಪೈಪ್ ಬಾಂಬ್‍ಗಳು ಪತ್ತೆಯಾಗಿದ್ದು ಇವು ಪ್ರಬಲ ಬಾಂಬ್‍ಗಳಾಗಿವೆ. ಅವುಗಳನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕೊರೊನಾ ಸೋಂಕು ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಶೇ.50ರಷ್ಟು ಸಿಬ್ಬಂದಿಯೊಂದಿಗೆ ಮಾತ್ರ ಕಾರ್ಖಾನೆ ನಡೆಸುವಂತೆ ಸರ್ಕಾರ ಸೂಚನೆ ನೀಡಿದ್ದರಿಂದ ಸಿಮೆಂಟ್ ಕಾರ್ಖಾನೆಯು ಕೆಲವು ನೌಕರರನ್ನು ಕೆಲಸದಿಂದ ತೆಗೆದುಹಾಕಲಾಗಿತ್ತು ಎನ್ನಲಾಗಿದೆ.
ಕೆಲಸದಿಂದ ವಜಾಗೊಂಡ ಕೆಲವು ವ್ಯಕ್ತಿಗಳು ಕಾರ್ಖಾನೆ ಆಡಳಿತ ಮಂಡಳಿಗೆ ದೂರವಾಣಿ ಕರೆ ಮಾಡಿ ಪರಿಹಾರವಾಗಿ 50 ಲಕ್ಷ ಹಣ ನೀಡಬೇಕು. ಇಲ್ಲದಿದ್ದರೆ ಕಾರ್ಖಾನೆಯ ಐದು ಕಡೆ ಹುದುಗಿಸಿಟ್ಟ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದರು.
ಈ ಕುರಿತು ಆಡಳಿತ ಮಂಡಳಿ ನೀಡಿದ ದೂರಿನ ಮೇರೆಗೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ತಪಾಸಣೆ ನಡೆಸಿದಾಗ ಎರಡು ಪ್ರಬಲ ಪೈಪ್ ಬಾಂಬ್‍ಗಳು ಪತ್ತೆಯಾದವು. ಪೊಲೀಸರು ಈಗ ಅದನ್ನು ನಿಷ್ಕ್ರಿಯಗೊಳಿಸಿದ್ದಾರೆ.
ಕೆಲಸದಿಂದ ತೆಗೆದುಹಾಕಲಾದ ನೌಕರರೇ ಇಂತಹ ಕೃತ್ಯ ನಡೆಸಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಆರೋಪಿಗಳ ಶೋಧ ಕಾರ್ಯಚರಣೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ