ಮುಂಬೈದಾಳಿ ಮಾಸ್ಟರ್ ಮೈಂಡ್ ಹಫೀಸ್ ಸಯೀದ್ ಮನೆ ಎದುರು ಕಾರ್ ಬಾಂಬ್ ಸ್ಫೋಟ: ಮೂವರು ಸಾವು

ಲಾಹೋರ್: ಮುಂಬೈ ಭಯೋತ್ಪಾದಕ ದಾಳಿ ಮಾಸ್ಟರ್ ಮೈಂಡ್ ಪಾಕಿಸ್ತಾನದ ಹಫೀಸ್ ಸಯೀದನ ಲಾಹೋರ್ ನಲ್ಲಿರುವ ಮನೆ ಎದುರು ಕಾರ್ ಬಾಂಬ್ ಸ್ಫೋಟ ಸಂಭವಿಸಿದ್ದು ಈ ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಜೌಹಾರ್ ಟೌನ್ ನಲ್ಲಿರುವ ಬಿಒಆರ್ ಸೊಸೈಟಿಯಲ್ಲಿನ ಪೊಲೀಸ್ ಪಿಕೆಟ್ ನ ಬಳಿ ಸ್ಫೋಟ ಸಂಭವಿಸಿದೆ. ಪಾಕಿಸ್ತಾನದ ಪಂಜಾಬ್ ಪೊಲೀಸ್ ಮುಖ್ಯಸ್ಥ ಇನಾಮ್ ಘನಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪೊಲೀಸ್ ಪಿಕೆಟ್ ಇಲ್ಲದೇ ಇದ್ದಿದ್ದಲ್ಲಿ ಮತ್ತಷ್ಟು ಹಾನಿ ಸಂಭವಿಸುತ್ತಿತ್ತು ಎಂದು ಅವರು ಹೇಳಿದ್ದಾರೆ.
ಕಾರಿನಲ್ಲಿ ಸ್ಫೋಟಕ ಸಾಮಗ್ರಿಗಳನ್ನು ಇರಿಸಲಾಗಿತ್ತು. ಪೊಲೀಸ್ ಚೌಕಿಯನ್ನು ದಾಟದ ಕಾರಣ ಕಡಿಮೆ ಹಾನಿ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳನ್ನು ಜಿನ್ನಾ ಆಸ್ಪತ್ರೆಗೆ ದಾಖಲಾಗಿದ್ದು, ಇವರಲ್ಲಿ 6 ಮಂದಿಯ ಸ್ಥಿತಿ ಗಂಭೀರವಾಗಿದೆ.
ಭಯೋತ್ಪಾದನಾ ನಿಗ್ರಹ ಇಲಾಖೆ (ಸಿಟಿಡಿ) ಸ್ಥಳಕ್ಕೆ ತೆರಳಿದ್ದು, ಎಲ್ಲಾ ದೃಷ್ಟಿಯಿಂದಲೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ಘನಿ ಮಾಹಿತಿ ನೀಡಿದ್ದಾರೆ.

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement