ಮುಂಬೈ‌ನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರನ ಬಂಧನ

ಮುಂಬೈ‌: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್‌ನನ್ನು ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಇಕ್ಬಾಲ್ ಕಸ್ಕರ್‌ನನ್ನು ಡ್ರಗ್ಸ್ ಪ್ರಕರಣದಲ್ಲಿ ಇಕ್ಬಾಲ್ ಕಸ್ಕರ್‌ನನ್ನು ಮಾದಕ ವಸ್ತು ನಿಯಂತ್ರಣ ಬ್ಯೂರೊ (NCB) ಅಧಿಕಾರಿಗಳು ಬಂಧಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿದ್ದ ಅಂತಾರಾಜ್ಯ ಮಾದಕ ವಸ್ತು ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವೂದ್ ಇಬ್ರಾಹಿಂ ಸೋದರ ಇಕ್ಬಾಲ್ ಕಸ್ಕರನನ್ನು ಬಂಧಿಸಲಾಗಿದ್ದು, ಈತ ಜಮ್ಮು ಮತ್ತು ಕಾಶ್ಮೀರದಿಂದ ಪಂಜಾಬ್​ ಮೂಲಕ ಮಾದಕ ವಸ್ತು ತಂದು ಮುಂಬೈನಲ್ಲಿ ಮಾರಾಟ ಮಾಡುತ್ತಿದ್ದ ಎಂದು ಹೇಳಲಾಗಿದೆ.
ಥಾಣೆಯಲ್ಲಿ ಗೃಹ ನಿರ್ಮಾಣದಾರರಿಂದ ಹಫ್ತಾ ವಸೂಲಿ ವೇಳೆ 2017ರಲ್ಲಿ ಇಕ್ಬಾಲ್ ಕಸ್ಕರ್‌ನನ್ನು ಬಂಧಿಸಲಾಗಿತ್ತು. ಅವನ ವಿರುದ್ಧ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯಿದೆ (MCOCA) ದಾಖಲಿಸಲಾಗಿತ್ತು.
ಹತ್ಯೆ ಪ್ರಕರಣವೊಂದರಲ್ಲಿ 2003ರಲ್ಲಿ ಅರಬ್​ ಕೊಲ್ಲಿ ರಾಷ್ಟ್ರಗಳಿಂದ ಇಕ್ಬಾಲ್ ಕಸ್ಕರ್‌ನನ್ನು ಗಡಿಪಾರು ಮಾಡಲಾಗಿತ್ತು. ಆದರೆ 2007ರಲ್ಲಿ ಆ ಪ್ರಕರಣದಲ್ಲಿ ಅವನನ್ನು ನಿರ್ದೋಷಿ ಎಂದು ಬಿಡುಗಡೆ ಮಾಡಲಾಗಿತ್ತು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 2

ನಿಮ್ಮ ಕಾಮೆಂಟ್ ಬರೆಯಿರಿ