ಕರ್ನಾಟಕದಲ್ಲಿ ಬುಧವಾರ ದೈನಂದಿನ ಸೋಂಕು ತುಸು ಹೆಚ್ಚಳ

ಬೆಂಗಳೂರು: ರಾಜ್ಯದಲ್ಲಿ ಬುಧವಾರ ಕೊರೊನಾ ಸೋಂಕು ಮಂಗಳವಾರಕ್ಕೆ ಹೋಲಿಸಿದರೆ ತುಸು ಏರಿಕೆಯಾಗಿದ್ದು ಸಾವಿನ ಸಂಖ್ಯೆ ಕಡಿಮೆಯಾಗಿದೆ.
ರಾಜ್ಯದಲ್ಲಿ ಬುಧವಾರ 4436 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು 123 ಮಂದಿ ಮೃತಪಟ್ಟಿದ್ದಾರೆ‌ .ಇದೇ ಸಮಯದಲ್ಲಿ 6455 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿನ ಪಾಸಿಟಿವಿ ಪ್ರಮಾಣ ಶೇ. 2.59 ಕ್ಕೆ ಹಾಗೂ ಸೋಂಕಿನ ಸಾವಿನ ಪ್ರಮಾಣ ಶೇ. 2.77 ಕ್ಕೆ ಕುಸಿದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಒಟ್ಟಾರೆಯಾಗಿ ರಾಜ್ಯದ ಸೋಂಕಿನ ಸಂಖ್ಯೆ 28,19,465 ಕ್ಕೆ ಹೆಚ್ಚಳವಾಗಿದೆ. ರಾಜ್ಯದಲ್ಲಿ ಇದುವರೆಗೂ ಮೃತಪಟ್ಟವರ ಸಂಖ್ಯೆ 34,287 ಕ್ಕೆ ಏರಿಕೆಯಾಗಿದೆ. ಚೇತರಿಸಿಕೊಂಡವರ ಸಂಖ್ಯೆ 26,68,705 ಕ್ಕೆ ಏರಿಕೆಯಾಗಿದೆ.ರಾಜ್ಯದಲ್ಲಿ ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 1,16,450 ಕುಸಿದಿದೆ.
ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ 1008 ಮಂದಿಗೆ ಸೋಂಕು ಕಾಣಿಸಿಕೊಂಡಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1,70,654 ಮಂದಿಗೆ ಸೋಂಕು ಪತ್ತೆ ಪರೀಕ್ಷೆ ಮಾಡಲಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಇಲ್ಲಿಯ ತನಕ 3,31,89023 ಕ್ಕೆ ಏರಿಕೆಯಾಗಿದೆ ಆರೋಗ್ಯ ಇಲಾಖೆ ತಿಳಿಸಿದೆ.
ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಕಾಲಿಗೆ ಗುಂಡೇಟು

23-06-2021 HMB Kannada

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement