ಕೋವಿಡ್‌ ಸಂಕಷ್ಟದಲ್ಲಿ ಸ್ವಿಮ್ಮಿಂಗ್‌ ಪೂಲ್‌ ನಿರ್ಮಾಣ : ರೋಹಿಣಿ ಸಿಂಧೂರಿ ನೈತಿಕ ಪ್ರಜ್ಞೆ ಪ್ರಶ್ನಿಸಿದ ಐಪಿಎಸ್‌ ಅಧಿಕಾರಿ ಡಿ.ರೂಪಾ

ಬೆಂಗಳೂರು: ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ಸರ್ಕಾರಿ ಮನೆಯಲ್ಲಿ ಕಟ್ಟಿಸಿಕೊಂಡಿದ್ದ ಈಜುಕೊಳ ಅಕ್ರಮ ಎಂಬ ತನಿಖಾ ವರದಿ ಬೆನ್ನಲ್ಲೇ ಸಾರ್ವಜನಿಕರ ಹಣದಲ್ಲಿ ಸ್ವಿಮ್ಮಿಂಗ್​ಪೂಲ್​ ಕಟ್ಟಿಸಿಕೊಂಡಿದ್ದಕ್ಕೆ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್​​​​​​ ಅಧಿಕಾರಿ ಡಿ. ರೂಪಾ ಕಿಡಿಕಾರಿದ್ದಾರೆ.
ಅಸಮಾಧಾನ ವ್ಯಕ್ತಪಡಿಸಿ ಫೇಸ್​​ಬುಕ್​ನಲ್ಲಿ ಪೋಸ್ಟ್​​ ಹಾಕಿದ್ದಾರೆ. ಕೊರೊನಾ ಸಂಕಷ್ಟದಲ್ಲಿ ಈಜುಕೊಳ ನಿರ್ಮಾಣ ಪ್ರಕರಣ ರೋಹಿಣಿ ಸಿಂಧೂರಿ ಅವರ ನೈತಿಕ ಪತನವನ್ನು ತೋರುತ್ತದೆ ಎಂದು ಟೀಕಿಸಿದ್ದಾರೆ.
ಕೊರೊನಾ ಹಾಗೂ ಆರ್ಥಿಕ ವ್ಯವಸ್ಥೆಯಿಂದ ಜನರು ಸಂತ್ರಸ್ತರಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಜನರ ಹಣದಲ್ಲಿ ಸ್ವಿಮ್ಮಿಂಗ್ ಪೂಲ್ ಕಟ್ಟಿರುವುದು ಮೊಟ್ಟ ಮೊದಲನೆಯದಾಗಿ ರೋಹಿಣಿ ಐಎಎಸ್ ಅವರ ನೈತಿಕ ಪತನ ಎದ್ದು ತೋರಿಸುತ್ತದೆ. ಈಜುಕೊಳ ಕಟ್ಟಲು ಪರವಾನಗಿ ತೆಗೆದು ಕೊಂಡಿಲ್ಲ ಎನ್ನುವುದು ನಂತರ ವಿಚಾರ. ಆದರೆ ಕಟ್ಟುವುದನ್ನು ಮುಂದೂಡಬಹುದಿತ್ತು ಎಂದು ಹೇಳಿದ್ದಾರೆ.
ಮೈಸೂರು ಜಿಲ್ಲಾಧಿಕಾರಿ ಆಗಿದ್ದ ಸಂದರ್ಭದಲ್ಲಿ ಮನೆಯಲ್ಲಿ ಈಜುಕೊಳ ನಿರ್ಮಿಸಿಕೊಂಡಿದ್ದ ವಿಚಾರ ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿಗೆ ಸಂಕಷ್ಟ ತಂದೊಡ್ಡಿದೆ. ಸ್ವಿಮ್ಮಿಂಗ್​ ಪೂಲ್​ ನಿರ್ಮಾಣ ಸಂಬಂಧ ಪ್ರಾದೇಶಿಕ ಆಯುಕ್ತರು ರಾಜ್ಯ ಸರ್ಕಾರಕ್ಕೆ ಮಂಗಳವಾರ ತನಿಖಾ ವರದಿ ಸಲ್ಲಿಸಿದ್ದಾರೆ. ಈಜುಕೊಳ ನಿರ್ಮಾಣಕ್ಕೆ 32 ಲಕ್ಷ ರೂಪಾಯಿ ವೆಚ್ಚವಾಗಿದೆ. ಇದಕ್ಕೆ ತಾಂತ್ರಿಕ ವರ್ಗದಿಂದ ,ಲೋಕೋಪಯೋಗಿ ಇಲಾಖೆಯಿಂದ ಅನುಮತಿಯನ್ನೇ ಪಡೆದಿಲ್ಲ. ಆಡಳಿತಾತ್ಮಕ ಮಂಜೂರಾತಿಯನ್ನು ಪಡೆದಿಲ್ಲ ಎಂದು ವರದಿ ನೀಡಿರುವುದು ರೋಹಿಣಿ ಸಿಂಧೂರಿಗೆ ತೀವ್ರ ಹಿನ್ನಡೆಯಾಗಿದೆ.

ಪ್ರಮುಖ ಸುದ್ದಿ :-   ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ತಲೆದಂಡ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement