ಜಮ್ಮು-ಕಾಶ್ಮೀರ:ಪ್ರಧಾನಿ ಕರೆದ ಜೂ.24ರ ಸರ್ವ ಪಕ್ಷಗಳ ಸಭೆಯಲ್ಲಿ ಪಾಲ್ಗೊಳ್ಳುವ ಕಾಂಗ್ರೆಸ್​

ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ಸಂಬಂಧಪಟ್ಟ ವಿಚಾರಗಳನ್ನು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಕರೆದ ಸಭೆಯಲ್ಲಿ ಪಾಲ್ಗೊಳ್ಳುವುದಾಗಿ ಕಾಂಗ್ರೆಸ್ ಪಕ್ಷ ಹೇಳಿದೆ.
ಜೂ.24ರಂದು ಈ ಸಭೆ ನಡೆಯಲಿದ್ದು ಕಾಂಗ್ರೆಸ್​ ಸೇರಿ ಪ್ರಮುಖ ಪಕ್ಷಗಳ ನಾಯಕರನ್ನು ಸಭೆಗೆ ಆಹ್ವಾನಿಸಲಾಗಿದೆ. ಗುಪ್ಕಾರ್​ ಮೈತ್ರಿಕೂಟ ಕೂಡ ಈ ಸಭೆಯಲ್ಲಿ ಪಾಲ್ಗೊಂಳ್ಳುವುದಾಗಿ ತಿಳಿಸಿದೆ. ಕಳೆದ ವರ್ಷ ಕೇಂದ್ರ ಸರ್ಕಾರ ಕಾಶ್ಮೀರದಲ್ಲಿ ವಿಶೇಷ ಸ್ಥಾನಮಾನ ಮತ್ತು ಆರ್ಟಿಕಲ್​ 35ಎ ಯನ್ನು ರದ್ದುಗೊಳಿಸಿದ ಇದು ಜಮ್ಮು-ಕಾಶ್ಮೀರಕ್ಕೆ ಸಂಬಂದಿಸಿದಂತೆ ಮೊದಲ ಪ್ರಮುಖ ಸಭೆಯಾಗಿದೆ. ಮುಂದಿನ ವರ್ಷ ಅಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಹೀಗಾಗಿ ಕ್ಷೇತ್ರಗಳ ರಚನೆ ಸೇರಿ ಮತ್ತಿತರ ವಿಚಾರಗಳನ್ನು ಜೂ.24ರ ಸಭೆಯಲ್ಲಿ ಪ್ರಧಾನಿ ಮೋದಿ ಎಲ್ಲ ಪ್ರಮುಖ ಪಕ್ಷಗಳೊಟ್ಟಿಗೆ ಚರ್ಚಿಸುವ ಸಾಧ್ಯತೆಗಳಿವೆ.
ಸಭೆಯಲ್ಲಿ ಕಾಂಗ್ರೆಸ್​ ಪಾಲ್ಗೊಳ್ಳುತ್ತದೆ ಎಂದು ಜಮ್ಮು-ಕಾಶ್ಮೀರದ ಕಾಂಗ್ರೆಸ್ ವಕ್ತಾರ ರವೀಂದರ್​ ಶರ್ಮಾ ತಿಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಮ್ಮು-ಕಾಶ್ಮೀರ ಕಾಂಗ್ರೆಸ್​ ಮುಖ್ಯಸ್ಥ ಗುಲಾಮ್​ ಅಹ್ಮದ್​ ಮಿರ್​, ನಮಗೆ ಅಧಿಕೃತ ಆಮಂತ್ರಣ ಬಂದಿದೆ. ಆದರೆ ಅದರಲ್ಲಿ ಮೀಟಿಂಗ್​ನ ಅಜೆಂಡಾವನ್ನು ಉಲ್ಲೇಖಿಸಿಲ್ಲ ಎಂದು ಹೇಳಿದ್ದಾರೆ. ಈ ಸಭೆಯಲ್ಲಿ ಕಾಂಗ್ರೆಸ್​​ನಿಂದ ಜಮ್ಮುಮತ್ತು ಕಾಶ್ಮೀರ ಕಾಂಗ್ರೆಸ್​ ಅಧ್ಯಕ್ಷನಾಗಿ ನಾನು, ಮಾಜಿ ಮುಖ್ಯಮಂತ್ರಿ ಗುಲಾಂ ನಭಿ ಆಜಾದ್​ ಮತ್ತು ಮಾಜಿ ಉಪಮುಖ್ಯಮಂತ್ರಿ ತಾರಾ ಚಾಂದ್​ ಭಾಗವಹಿಸುತ್ತೇವೆ ಎಂದೂ ತಿಳಿಸಿದ್ದಾರೆ.
ಪ್ರಧಾನಿ ಮೋದಿ ಕರೆದಿರುವ ಸರ್ವಪಕ್ಷಗಳ ಸಭೆಯಲ್ಲಿ ಕಾಂಗ್ರೆಸ್​​ನಿಂದ ಯಾರು ಭಾಗವಹಿಸಬೇಕು ಎಂಬುದನ್ನು ಚರ್ಚಿಸಲು ಸೋನಿಯಾ ಗಾಂಧಿ ನೇತೃತ್ವದಲ್ಲಿ ಸಭೆ ನಡೆಸಲಾಗಿತ್ತು ಎಂದೂ ಮಿರ್​ ಮಾಹಿತಿ ನೀಡಿದ್ದಾರೆ. ಜೂ.24ರಂದು ದೆಹಲಿಯಲ್ಲಿ ಜಮ್ಮು-ಕಾಶ್ಮೀರ ಸರ್ವಪಕ್ಷಗಳ ಸಭೆ ನಡೆಯಲಿದ್ದು, ಒಟ್ಟು 14 ಪ್ರಮುಖ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಮೋದಿ ಚರ್ಚೆ ನಡೆಸಲಿದ್ದಾರೆ.

ಪ್ರಮುಖ ಸುದ್ದಿ :-   ಬಿಹಾರದಲ್ಲಿ ಮತಪಟ್ಟಿ ಪರಿಷ್ಕರಣೆ ; ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ ಆರ್‌ಜೆಡಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement