ಮುಂಗಾರು ದುರ್ಬಲ; ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ಮಂಗಳವಾರದಿಂದ ನೈಋತ್ಯ ಮುಂಗಾರು ದುರ್ಬಲಗೊಂಡಿದ್ದು, ಮಲೆನಾಡು, ದಕ್ಷಿಣ ಕನ್ನಡ ಹೊರತುಪಡಿಸಿದರೆ ಉಳಿದೆಲ್ಲ ಕಡೆ ಕಡಿಮೆ ಪ್ರಮಾಣದಲ್ಲಿ ಮಳೆಯಾಗುತ್ತಿದೆ.
ಮುಂದಿನ 24ಗಂಟೆಯಲ್ಲಿ ಕೂಡ ರಾಜ್ಯದಲ್ಲಿ ಕರಾವಳಿ ಭಾಗಗಳಲ್ಲಿ, ದಕ್ಷಿಣ ಕನ್ನಡದ ಕೆಲವು ಭಾಗಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗಿನಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಜೂ.24ರ ವರೆಗೂ ಮುಂಗಾರು ದುರ್ಬಲ ಆಗಿರುವುದರಿಂದ ಭಾರಿ ಮಳೆಯಾಗುವುದಿಲ್ಲ ಎಂದು ಐಎಂಡಿ ಹೇಳಿದೆ.
ಜೂ.24ರವರೆಗೆ ಬೆಂಗಳೂರು ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣವೇ ಮುಂದುವರಿಯಲಿದ್ದು, ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ಪ್ರಮಾಣವೂ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಜೂ.27ರಿಂದ 29ರವರೆಗೆ ಬೆಂಗಳೂರು ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಮಳೆ ಬೀಳಲಿದೆ. 28 ಮತ್ತು 29ರಂದು ಗುಡುಗು-ಮಿಂಚು ಸಹಿತ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement