ಬೆಂಗಳೂರು: ಇನ್ನು ಚುನಾವಣೆಯೇ ನಡೆದಿಲ್ಲ, ಆದರೂ ಮುಂದಿನ ಮುಖ್ಯಮಂತ್ರಿ ಯಾರು ಎಂಬುದರ ವಿವಾದ ಕಾಂಗ್ರೆಸ್‌ನ್ಲಿ ಈಗಲೇ ತಾರಕಕ್ಕೇರಿದ್ದು, ಹೈಕಮಾಂಡ್ ಈ ಬಗ್ಗೆ ಮಾತನಾಡಬೇಡಿ ಎಂದು ಸೂಚನೆ ನೀಡಿದ್ದರೂ ಮುಂದುವರಿದಿದೆ.
ಈ ಬೆನ್ನಲ್ಲೇ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದಾಮಯ್ಯ ಅವರಿಗೆ ದೆಹಲಿಗೆ ಬರುವಂತೆ ಹೈಕಮಾಂಡ್ ಬುಲಾವ್ ನೀಡಿದೆ ಎಮದು ಹೇಳಲಾಗುತ್ತಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೆಹಲಿಗೆ ಹೋಗಿ ಕಾಂಗ್ರೆಸ್ ವರಿಷ್ಠ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿ ಬಂದ ಬೆನ್ನಲ್ಲೆ ಹೈಕಮಾಂಡ್ ಸಿದ್ದರಾಮಯ್ಯ ಅವರ ಜೊತೆ ದೂರವಾಣಿಯಲ್ಲಿ ಮಾತನಾಡಿದ್ದು, ಈ ಹಿನ್ನೆಲೆಯಲ್ಲಿ ಅವರು ದೆಹಲಿಗೆ ಹೊರಟ್ಟಿದ್ದಾರೆ ಎನ್ನಲಾಗಿದೆ.
ಮಾಜಿ ಸಚಿವರಾಗ ಜಮೀರ್ ಅಹಮದ್ ಮುಂದಿನ ಮುಖ್ಯಮಂತ್ರಿ ಕುರಿತು ಪದೇ ಪದೇ ಹೇಳಿಕೆ ನೀಡಿ ಗೊಂದಲಕ್ಕೆ ಕಾರಣರಾಗುತ್ತಿದ್ದಾರೆ. ಅವರು ಹಚ್ಚಿದ ಬೆಂಕಿಗೆ ಪಕ್ಷದ ಹಲವಾರು ನಾಯಕರು ತುಪ್ಪು ಸುರಿದಿದ್ದಾರೆ.ಮಾಜಿ ಸಚಿವ ಬಸವರಾಜ ರಾಯರೆಡ್ಡಿ, ಶಾಸಕರಾದ ಭೀಮಾನಾಯ್ಕ, ಕಂಪ್ಲಿ ಗಣೇಶ್, ರಾಘವೇಂದ್ರ ಇಟ್ನಾಳ, ಅಖಂಡ ಶ್ರೀನಿವಾಸಮೂರ್ತಿ ಸೇರಿದಂತೆ ಅನೇಕರು ಸಿದ್ದರಾಮಯ್ಯ ಅವರನ್ನು ಬೆಂಬಲಿಸಿ ಹೇಳಿಕೆ ನೀಡಿದ್ದಾರೆ. ಇಲ್ಲಿ ಗಮನಾರ್ಹ ಅಂಶವೆಂದರೆ ಮುಂದಿನ ಮುಖ್ಯಮಂತ್ರಿ ಕುರಿತು ಹೇಳಿಕೆ ನೀಡುತ್ತಿರುವವರೆಲ್ಲ ಹೆಚ್ಚಿನವರು ವಲಸಿಗ ನಾಯಕರು.
ಬಿಜೆಪಿಯಲ್ಲಿ ನಾಯಕತ್ವದ ಗೊಂದಲದಿಂದಾಗ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾಗಿದ್ದರೆ ಈಗ ಅದು ಪ್ರತಿಪಕ್ಷವಾದ ಕಾಂಗ್ರೆಸ್ಸಿನಲ್ಲಿ ತಾರಕಕ್ಕೇರಿದೆ. ಸದ್ಯಕ್ಕೆ ಯಾವುದೇ ಚುನಾವಣೆ ಇಲ್ಲ. ಆದರೂ ಕಾಂಗ್ರೆಸ್‌ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಈಗಲೇ ಚರ್ಚೆ ಆರಂಭವಾಗಿದೆ. ಕೊರೊನಾದಂತಹ ಗಂಭೀರ ವಿಷಯಗಳಲ್ಲಿ ಜನ ತತ್ತರಿಸಿದ್ದಾರೆ. ಸರ್ಕಾರದ ವೈಪಲ್ಯಗಳ ಬಗ್ಗೆ ಮಾತನಾಡದೆ ಕಾಂಗ್ರೆಸ್ ಶಾಸಕರು ಇದಕ್ಕಿದ್ದಂತೆ ಮುಂದಿನ ಮುಖ್ಯಮಂತ್ರಿ ಹುದ್ದೆ ಕುರಿತು ಚರ್ಚೆ ಆರಂಭಿಸಿದ್ದೇಕೆ ಎಂಬ ಪ್ರಶ್ನೆ ಉದ್ಭವಿಸಿದೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಯ್ಕೆ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು, ಶಾಸಕರು ಹಾಗೂ ನಾಯಕರ ಹೇಳಿಕೆಗಳು ಅವರ ವೈಯಕ್ತಿಕ ಎಂದು ತೇಲಿಸಿ ಮಾತನಾಡಿದ್ದಾರೆ. ನಿನ್ನೆ ಹೈಕಮಾಂಡ್ ಕಟ್ಟುನಿಟ್ಟಿನ ಸೂಚನೆ ನೀಡಿದ ಮೇಲೆ ಬಳ್ಳಾರಿಯಲ್ಲಿ ಮತ್ತೆ ಅದೇ ಧಾಟಿಯಲ್ಲಿ ಸ್ಪಷ್ಟನೆ ನೀಡಿದ್ದಾರೆ. ಹೈ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದ ನಂತರ ಕಾಂಗ್ರೆಸ್ ಶಾಸಕರಾದ ಅಖಂಡ ಶ್ರೀನಿವಾಸಮೂರ್ತಿ ಹಾಗೂ ರಾಮಯ್ಯ ಅವರು ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಆಗುವ ಬಗ್ಗೆ ಇಚ್ಛೆ ವ್ಯಕ್ತಪಡಿಸಿ ಹೇಳಿಕೆ ನೀಡಿದ್ದಾರೆ. ರಾಜಕೀಯವಾಗಿ ನಿಷ್ಠುರವಾಗಿ ಮಾತನಾಡುವ ಸಿದ್ದರಾಮಯ್ಯ ತಮ್ಮ ಬೆಂಬಲಿಗರ ಮಾತಿಗೆ ಕಡಿವಾಣ ಹಾಕಲು ಮುಂದಾಗುತ್ತಿಲ್ಲ ಎಂದು ಮೂಲ ಕಾಂಗ್ರೆಸ್ಸಿಗರು ಪ್ರಶ್ನಿಸಿದ್ದಾರೆ.
ಅವರು ಉದ್ದೇಶಪೂರ್ವಕವಾಗಿಯೇ ತಮ್ಮ ಬೆಂಬಲಿಗರ ಬಗ್ಗೆ ಮೃಧು ದೋರಣೆ ಅನುಸರಿಸುತ್ತಿರುವುದೇಕೆ? ಗೊಂದಲಕ್ಕೆ ಅವರು ಈ ಕುಮ್ಮಕ್ಕು ನೀಡುತ್ತಿದ್ದಾರೆಯೇ ಎಂಬ ಪ್ರಶ್ನೆಗಳು ಕಾಂಗ್ರೆಸ್ಸಿನಲ್ಲಿಯೇ ಕೇಳಿ ಬಂದಿವೆ.ಅದು ಈಗ ಹೈಕಮಾಂಡ್ ಅಂಗಳದವರೆಗೂ ಹೋಗಿದೆ.
ವಲಸಿಗ ನಾಯಕರಿಂದ ಪಕ್ಷಕ್ಕೆ ಉಂಟಾಗಿರುವ ಮುಜುಗರದಿಂದ ಆಗುವ ಹಾನಿ ತಪ್ಪಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೈಕಮಾಂಡ್ ಮುಂದೆ ಪ್ರಸ್ತಾವನೆ ಮಂಡಿಸಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ದುಡುಕದಂತೆ ಸಲಹೆ ನೀಡಿರುವ ಹೈಕಮಾಂಡ್ ನಾಯಕರು ಸಿದ್ದರಾಮಯ್ಯ ಅವರನ್ನು ಮುಂದಿನ ತಿಂಗಳು ದೆಹಲಿಗೆ ಕರೆಸಿಕೊಂಡು ಚರ್ಚೆ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಹರಿದಾಡುತ್ತಿದೆ.
ಶೀಘ್ರವೇ ಶಾಸಕಾಂಗ ಸಭೆ ಕರೆದು ಗೊಂದಲಗಳಿಗೆ ತೆರೆ ಎಳಿಯುವಂತೆ ಸೂಚಿಸುವುದಾಗಿಯೂ ಭರವಸೆ ನೀಡಿದ್ದಾರೆ.
ಇಲ್ಲದ ಕುರ್ಚಿಯ ಕುರಿತು ಚರ್ಚೆ ಮಾಡಿ ಕಾಂಗ್ರೆಸ್ ನಾಯಕರು ಜನರ ಮುಂದೆ ಪಕ್ಷದ ಇಮೇಜಿಗೆ ಧಕ್ಕೆ ತರುತ್ತಿರುವುದಕ್ಕೂ ಕೈಕಮಾಂಡ್ ಕೂಡ ಗರಂ ಆಗಿದೆ ಎನ್ನಲಾಗಿದೆ. ಈ ಮಧ್ಯೆ ಈಗ ಸಿದ್ದರಾಮಯ್ಯ ಅವರಿಗೆ ದೆಹಲಿಗೆ ಬುಲಾವ್ ಬಂದಿದೆ ಎಂಬ ವಿಷಯ ಕಾಂಗ್ರೆಸ್‌ನಲ್ಲಿ ಹರಿದಾಡುತ್ತಿದೆ.
ನಿಮ್ಮ ಕಾಮೆಂಟ್ ಬರೆಯಿರಿ