ಕಾರವಾರ: ಮನೆ ಕುಸಿದು ಓರ್ವ ಸಾವು, ಮತ್ತೊಬ್ಬ ಆಸ್ಪತ್ರೆಗೆ ದಾಖಲು

posted in: ರಾಜ್ಯ | 0

ಕಾರವಾರ:ಮನೆ ದುರಸ್ತಿ ವೇಳೆ ಗೋಡೆ ಕುಸಿದು ಕಾರ್ಮಿಕನೊಬ್ಬ ಮೃತಪಟ್ಟಿದ್ದು ಇನ್ನೊಬ್ಬ ಕಾರ್ಮಿಕ ಗಂಭೀರ ಗಾಯಗೊಂಡಿರುವ ಘಟನೆ ಕಾರವಾರದ ಸದಾಶಿವಘಡದ ವೈಶ್ಯಾವಾಡಾದಲ್ಲಿ ನಡೆದಿದೆ.
ಕಾರವಾರದ ಸದಾಶಿವಗಡದ ವೈಶ್ಯಾವಾಡದಲ್ಲಿ ತುಳಸಿ ಬಾಯಿ ಎಂಬುವವರ ಮನೆ ದುರಸ್ತಿ ವೇಳೆ ಗೋಡೆ ಕುಸಿದಿದೆ. ಘಟನೆಯಲ್ಲಿ ಕಾರ್ಮಿಕ, ಬಾಗಲಕೋಟ ಮೂಲದ ಹುಚ್ಚಪ್ಪ (35) ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಈತ ಗೋಡೆಯ ಅಡಿಯಲ್ಲೇ ಸಿಲುಕಿಕೊಂಡಿದ್ದ. ತಕ್ಷಣ ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಮೃತದೇಹವನ್ನು ಹೊರ ತೆಗೆದಿದ್ದಾರೆ. ಆದರೆ ಇನ್ನೊಬ್ಬ ಕಾರ್ಮಿಕ ಬೆಳ್ಳೂರಪ್ಪ ಗಂಭೀರಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೋಡೆ ಏಕಾಏಕಿ ಕುಸಿದ ಪರಿಣಾಮ ಇಬ್ಬರು ಕಾರ್ಮಿಕರು ಗೊಡೆ ಕೆಳಗೆ ಸಿಲುಕಿಕೊಂಡಿದ್ದರು. ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಓರ್ವನನ್ನು ರಕ್ಷಣೆ ಮಾಡಿದ್ದು ಇನ್ನೊಬ್ಬ ಮೇಲೆ ಭಾರಿ ಗಾತ್ರದ ಗೋಡೆಗಳು ಬಿದ್ದ ಪರಿಣಾಮ ಮಣ್ಣು ತೆಗೆಯುವ ವೇಳೆಗೆ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಪಿಎಸ್ಐ ಸಂಪತ್ ಕುಮಾರ ಭೇಟಿ ನೀಡಿದ್ದು, ಚಿತ್ತಾಕುಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ