ಗಾಜಿಯಾಬಾದ್ ‘ಹಲ್ಲೆ’ ವಿಡಿಯೋ ಪ್ರಕರಣ: ಟ್ವಿಟ್ಟರ್‌ ಎಂಡಿ ವಿರುದ್ಧ ಯಾವುದೇ ಬಲವಂತದ ಕ್ರಮವಿಲ್ಲ ಎಂದ ಕರ್ನಾಟಕ ಹೈಕೋರ್ಟ್‌

posted in: ರಾಜ್ಯ | 0

ಬೆಂಗಳೂರು: ಕೆಲವು ದಿನಗಳ ಹಿಂದೆ ಸೋಷಿಯಲ್ ಮೀಡಿಯಾದಲ್ಲಿ ಬೆಳಕಿಗೆ ಬಂದ ಘಜಿಯಾಬಾದ್ ಹಲ್ಲೆ ವಿಡಿಯೋಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಟ್ವಿಟರ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಮನೀಶ್ ಮಹೇಶ್ವರಿ ಅವರಿಗೆ ಮಧ್ಯಂತರ ಪರಿಹಾರ ನೀಡಿದೆ.
ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಎಂದು ಹೈಕೋರ್ಟ್ ಗಾಜಿಯಾಬಾದ್ ಪೊಲೀಸರಿಗೆ ನಿರ್ದೇಶನ ನೀಡಿದೆ.

ಗಾಜಿಯಾಬಾದ್ ಪೊಲೀಸರು ಟ್ವಿಟರ್ ಎಂಡಿ ಪರೀಕ್ಷಿಸಲು ಬಯಸಿದರೆ ಅದು ವರ್ಚುವಲ್‌ ವಿಧಾನದಲ್ಲಿ ವಿಚಾರಣೆ ಮಾಡಬಹುದು ಎಂದು ಹೇಳಿದೆ.
ಉತ್ತರ ಪ್ರದೇಶ ಪೊಲೀಸರು ಸಮನ್ಸ್ ಜಾರಿ ಮಾಡಿರುವ ಹಿನ್ನೆಲೆ ಟ್ವಿಟ್ಟರ್ ಇಂಡಿಯಾ ಮುಖ್ಯಸ್ಥ ಮನೀಶ್ ಮಹೇಶ್ವರಿ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದರು.ಮನೀಶ್ ಮಹೇಶ್ವರಿ ಕರ್ನಾಟಕ ಹೈಕೋರ್ಟ್​ಗೆ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ಗಾಜಿಯಾಬಾದ್​ ಜಿಲ್ಲೆಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಟರಿನಲ್ಲಿ ಶೇರ್‌ ಮಾಡಲಾದ ವಿಡಿಯೋ ಒಂದಕ್ಕೆ ಸಂಬಂಧಿಸಿದಂತೆ ಟ್ವಿಟರ್‌ ಇಂಡಿಯಾದ ಭಾರತದ ಮುಖ್ಯಸ್ಥ (ಎಂ.ಡಿ.) ಮನೀಶ್ ಮಹೇಶ್ವರಿ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.’ಘಾಜಿಯಾಬಾದ್‌ನಲ್ಲಿ ಮುಸ್ಲಿಂ ವ್ಯಕ್ತಿಗೆ ಥಳಿಸಿದ ಪ್ರಕರಣಕ್ಕೆ ಕೋಮು ಬಣ್ಣ ನೀಡಿದ್ದ ಪ್ರಕರಣದಲ್ಲಿ ಮಹೇಶ್ವರಿ ಅವರ ವಿಚಾರಣೆ ನಡೆಯಬೇಕಿದೆ.
ವಿಡಿಯೋ ಕಾಲ್ ಮೂಲಕ ವಿಚಾರಣೆ ಎದುರಿಸುವುದಾಗಿ ಮಹೇಶ್ವರಿ ಹೇಳಿದ್ದರು. ಆದರೆ ಇಂದು ಬೆಳಿಗ್ಗೆ 10.30 ಕ್ಕೆ ಹಾಜರಿರಬೇಕೆಂದು ಪೊಲೀಸರು ಸಮನ್ಸ್ ಜಾರಿಗೊಳಿಸಿದ್ದರು.ಈ ಪ್ರಕರಣದ ಆರೋಪಿಗಳ ಪಟ್ಟಿಯಲ್ಲಿ ಪತ್ರಕರ್ತರಾದ ರಾಣಾ ಅಯುಬ್, ಸಬಾ ನಖ್ವಿ, ಕಾಂಗ್ರೆಸ್ ನಾಯಕರಾದ ಸಲ್ಮಾನ್ ನಿಜಾಮಿ, ಶಮಾ ಮೊಹಮದ್ ಮತ್ತು ಮಸ್ಕೂರ್ ಉಸ್ಮಾನಿ ಇತರರನ್ನು ಹೆಸರಿಸಲಾಗಿತ್ತು. ಇವರೆಲ್ಲರೂ ದಾರಿತಪ್ಪಿಸುವ ಹಾಗೂ ಜೊತೆಗೆ ಕೋಮು ಭಾವನೆ ಕೆರಳಿಸುವಂಥ ಅಂಶಗಳಿರುವ ವಿಡಿಯೊಗಳನ್ನು ಟ್ವೀಟ್ ಮಾಡಿದ್ದರು ಎಂಬ ಆರೋಪವನ್ನು ಉತ್ತರ ಪ್ರದೇಶದ ಪೊಲೀಸರು ಇವರ ವಿರುದ್ಧ ಹೊರಿಸಲಾಗಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಕರ್ತ ರಾಣಾ ಅಯೂಬ್​ಗೆ ಬಾಂಬೆ ಹೈಕೋರ್ಟ್​ ಈ ವಾರದ ಆರಂಭದಲ್ಲಿ ನಾಲ್ಕು ವಾರಗಳ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು.
ಪೊಲೀಸ್ ಠಾಣೆಗೆ ಬಂದು ವಿಚಾರಣೆ ಎದುರಿಸುವಂತೆ ಗಾಜಿಯಾಬಾದ್ ಪೊಲೀಸರು ಮಹೇಶ್ವರಿ ಅವರಿಗೆ ಸಮನ್ಸ್​ ಜಾರಿ ಮಾಡಿದ್ದರು. ಪೊಲೀಸರ ಎದುರು ಹೇಳಿಕೆ ದಾಖಲಿಸಲು 7 ದಿನಗಳ ಕಾಲಾವಕಾಶ ನೀಡಲಾಗಿದೆ. ಈ ಬೆಳವಣಿಗೆಯ ನಂತರ, ನಿನ್ನೆ (ಜೂನ್ 23) ಮನೀಶ್‌ ಮಹೇಶ್ವರಿ ಹೈಕೋರ್ಟ್ ಮೆಟ್ಟಿಲೇರಿದ್ದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ