ಬೆಂಗಳೂರು : ಕಾನೂನು ಬಾಹಿರವಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉಪ ನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ನಿಯೋಜಿತ ಶಿಕ್ಷಕರು, ಕೂಡಲೇ ಮೂಲ ಶಾಲೆಗಳಲ್ಲಿ ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಖಡಕ್ ಆದೇಶಿದೆ.
ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಾದ(ಆಡಳಿತ) ಡಾ.ರೂಪಶ್ರೀ, ಎಲ್ಲ ಉಪ ನಿರ್ದೇಶಕರು, ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಪತ್ರ ಬರೆದಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಉಪ ನಿರ್ದೇಶರುಗಳು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮಕ್ಕಳ ಶೈಕ್ಷಣಿಕ ಹಿತಾಸಕ್ತಿಯನ್ನು ಗಮನದಲ್ಲಿರಿಸದೇ, ನಿಯಮಬಾಹಿರವಾಗಿ ಶಿಕ್ಷಕರನ್ನು ಇಲಾಖೆಯ ನಿಯಮಗಳನ್ನು ಉಲ್ಲಂಘಿಸಿ, ನಿಯೋಜನೆ ಮಾಡಿರುವುದು ಕಂಡು ಬಂದಿದೆ. ಈ ಬಗ್ಗೆ ನಿಯಮ ಉಲ್ಲಂಘಿಸಿ ಶಿಕ್ಷಕರುಗಳನ್ನು ನಿಯೋಜನೆಗೊಳಿಸಿರುವ ಉಪ ನಿರ್ದೇಶಕರುಗಳ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಸರ್ಕಾರದ ನಿರ್ದೇಶೇನವಿದೆ,ಈ ರಾಜ್ಯದ ಎಲ್ಲ ಜಿಲ್ಲೆ, ತಾಲ್ಲೂಕುಗಳಲ್ಲಿ ನಿಯೋಜನೆ ಮೇಲೆ ಕಚೇರಿ, ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಸಹ ಶಿಕ್ಷಕರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕರ್ತವ್ಯದಿಂದ ಬಿಡುಗಡೆ ಮಾಡಿ, ಮೂಲ ಶಾಲೆಗಳಲ್ಲಿ ಕೂಡಲೇ ಕರ್ತವ್ಯಕ್ಕೆ ಹಾಜರಾಗುವಂತೆ ಅಗತ್ಯ ಕ್ರಮ ಕೈಗೊಂಡು ಈ ಕಚೇರಿಗೆ ವರದಿ ಮಾಡಲು ತಿಳಿಸಿದೆ. ತಪ್ಪಿದ್ದಲ್ಲಿ, ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದೆಂದು ತಿಳಿಸಲಾಗಿದೆ.


ನಿಮ್ಮ ಕಾಮೆಂಟ್ ಬರೆಯಿರಿ