ಕರ್ನಾಟಕದಲ್ಲಿ ದೈನಂದಿನ ಕೊರೊನಾ ಸಂಖ್ಯೆ ಇಳಿಮುಖ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ (ಗುರುವಾರ) 3,979 ಹೊಸ ಕೊರೊನಾ ಸೋಂಕಿನ ಪ್ರಕರಣಗಳು ದಾಖಲಾಗಿವೆ. ಬೆಂಗಳೂರು ನಗರದಲ್ಲಿ 969 ಪ್ರಕರಣಗಳು ಪತ್ತೆಯಾಗಿವೆ.
ಕಳೆದ 24 ಗಂಟೆಗಳಲ್ಲಿ 138 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಈವರೆಗೂ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 34,425ಕ್ಕೆ ಏರಿಕೆಯಾಗಿದೆ. ಇದೇವೇಳೆ ರಾಜ್ಯದಲ್ಲಿ ಗುಣಮುಖರಾದವರ 9,768 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಗುರುವಾರ ಆರೋಗ್ಯ ಇಲಾಖೆ ಅಂಕಿ ಸಂಖ್ಯೆ ಪ್ರಕಾರ, ರಾಜ್ಯದಲ್ಲಿ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 28,23,444 ಆಗಿದೆ. ಇಲ್ಲಿಯವರೆಗೆ 26,78,473 ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯಕ್ಕೆ 1,10,523 ಸಕ್ರಿಯ ಕೊರೊನಾ ಪ್ರಕರಣಗಳಿವೆ.
ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೊಡಲಾಗಿದೆ.

24-06-2021 HMB Kannada

0 / 5. 0

ಶೇರ್ ಮಾಡಿ :
ಪ್ರಮುಖ ಸುದ್ದಿ :-   ವೀಡಿಯೊಗಳು..| ಬೆಂಗಳೂರಿನಲ್ಲಿ ಭಾರೀ ಮಳೆ : ತಾಪಮಾನ ದಿಢೀರ್‌ ಕುಸಿತ

ನಿಮ್ಮ ಕಾಮೆಂಟ್ ಬರೆಯಿರಿ

advertisement