ಕೃಷಿ ಕಾಯ್ದೆ ವಿರೋಧಿಸಿ ರಾಜಭವನದ ಮುಂದೆ ಜೂ.26ಕ್ಕೆ ರೈತರ ಪ್ರತಿಭಟನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಮೂರು ಕೃಷಿ ಕಾಯ್ದೆಗಳನ್ನು ರದ್ದುಪಡಿಸುವಂತೆ ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ರಾಜ ಭವನದ ಎದುರು ಜೂ.26ರಂದು ರೈತರ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಕೇಂದ್ರ ಸರ್ಕಾರ ಜಾರಿ ಮಾಡಿರುವ ಕೃಷಿ ಕಾಯ್ದೆಗಳು ರೈತರಿಗೆ ಮರಣ ಶಾಸನವಾಗಲಿದ್ದು, ಈ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ವಿದ್ಯುತ್ ಖಾಸಗೀಕರಣ ಮಾಡುವುದನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ 214ನೇ ದಿನಕ್ಕೆ ಮುಂದುವರಿದಿದೆ. 550ಕ್ಕೂ ಅಧಿಕ ರೈತರು ಹೋರಾಟಕ್ಕಾಗಿ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ.
ಕೇಂದ್ರ ಸರ್ಕಾರದ ಕಾರ್ಪೋರೇಟ್‌ ಕಂಪನಿಗಳ ಪರ ನೀತಿಗಳನ್ನು ಜಾರಿಮಾಡಿದ್ದು ಎಂದು ಆರೋಪಿಸಿ ದೇಶಾದ್ಯಂತ ಎಲ್ಲ ರಾಜ್ಯಗಳ ರಾಜ ಭವನದ ಎದುರು ಜೂ.26ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕದಲ್ಲಿ ಬೆಂಗಳೂರಿನ ರಾಜ್ಯ ಭವನದ ಎದುರು 26ರಂದು ಸಂಯುಕ್ತ ಕಿಸಾನ್ ಮೋರ್ಚಾ ವತಿಯಿಂದ ರೈತ ಸಂಘದ ಮುಖಂಡರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಿದ್ದಾರೆ ಎಂದು ಮೋರ್ಚಾ ಸಂಚಾಲಕ ಕುರುಬೂರು ಶಾಂತಕುಮಾರ ತಿಳಿಸಿದ್ದಾರೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement