ಬೆಂಗಳೂರು : ಮುಂದಿನ ಮುಖ್ಯಮಂತ್ರಿ ಕುರಿತು ಇನ್ನು ಮುಂದೆ ಯಾವುದೇ ಬಹಿರಂಗ ಹೇಳಿಕೆ ನೀಡಬಾರದು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ತಮ್ಮ ಬೆಂಬಲಿಗ ಶಾಸಕರಿಗೆ ಮನವಿ ಮಾಡಿದ್ದಾರೆ.
“ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ” ಎಂದು ಶಾಸಕರು ಹೇಳಿಕೆ ನೀಡುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಸಿದ್ದರಾಮಯ್ಯ ಅವರು ಶಾಸಕರಲ್ಲಿ ಈ ಮನವಿ ಮಾಡಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನೂ ಎರಡು ವರ್ಷ ಬಾಕಿ ಇದೆ. ಹೀಗಾಗಿ ಈಗಲೇ ಮುಂದಿನ ಮುಖ್ಯಮಂತ್ರಿ ಎಂದು ಬಹಿರಂಗ ಹೇಳಿಕೆ ಹಾಗೂ ಚರ್ಚೆ ಬೇಡ,ಈ ಬಗ್ಗೆ ಯಾರೂ ಯಾವುದೇ ಹೇಳಿಕೆ ನೀಡಬಾರದು. ಮುಖ್ಯಮಂತ್ರಿ ಯಾರಾಗಬೇಕು ಎಂಬುದನ್ನು ಚುನಾವಣೆ ಬಳಿಕ ಶಾಸಕರ ಅಭಿಪ್ರಾಯ ಪಡೆದು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.


ನಿಮ್ಮ ಕಾಮೆಂಟ್ ಬರೆಯಿರಿ