‘ಮೋದಿ ಸರ್‌ನೇಮ್‌’ ಹೇಳಿಕೆ ಕುರಿತು ಮಾನಹಾನಿ ಪ್ರಕರಣ: ಇಂದು ಸೂರತ್‌ ಕೋರ್ಟಿಗೆ ರಾಹುಲ್‌ ಗಾಂಧಿ

ಸೂರತ್‌: ಮೋದಿ ಉಪನಾಮ’ ಕುರಿತು ರಾಹುಲ್ ಗಾಂಧಿ ಹೇಳಿಕೆಗೆ ಸಂಬಂಧಿಸಿದಂತೆ ದಾಖಲಾಗರುವ ಮಾನನಷ್ಟ ಮೊಕದ್ದಮೆಯ ಪ್ರಕರಣದಲ್ಲಿ ಅಂತಿಮ ಹೇಳಿಕೆ ನೀಡಲು ಗುರುವಾರ ಬೆಳಿಗ್ಗೆ ರಾಹುಲ್‌ ಗಾಂಧಿ ಸೂರತ್‌ ತಲುಪಿದ್ದಾರೆ.
ರಾಹುಲ್ ಗಾಂಧಿ ವಿರುದ್ಧ ಸೂರತ್ ನ್ಯಾಯಾಲಯವು ಮಾನಹಾನಿ ಪ್ರಕರಣವನ್ನು ವಿಚಾರಣೆ ನಡೆಸುತ್ತಿದೆ. ‘ಮೋದಿ ಉಪನಾಮ’ ಕುರಿತು ರಾಹುಲ್ ಗಾಂಧಿ ಹೇಳಿಕೆಗೆ ಸಂಬಂಧಿಸಿದಂತೆ ಗುಜರಾತ್ ಬಿಜೆಪಿ ಶಾಸಕರೊಬ್ಬರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
2019 ರ ಏಪ್ರಿಲ್ 13 ರಂದು ಕರ್ನಾಟಕದ ಕೋಲಾರ್‌ನಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ ರಾಹುಲ್ ಗಾಂಧಿ, “ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ … ಅವರೆಲ್ಲರೂ ಮೋದಿಯನ್ನು ಸಾಮಾನ್ಯ ಉಪನಾಮವಾಗಿ ಹೇಗೆ ಹೊಂದಿದ್ದಾರೆ? ಎಲ್ಲ ಕಳ್ಳರು ಸಾಮಾನ್ಯ ಉಪನಾಮವಾಗಿ ಮೋದಿ ಹೇಗೆ ಬಂದಿದ್ದಾರೆ ಎಂದು ಹೇಳಿದ್ದರು.
ಮಾನಹಾನಿಗೆ ಸಂಬಂಧಿಸಿದ ಐಪಿಸಿ ಸೆಕ್ಷನ್ 499 ಮತ್ತು 500 ರ ಅಡಿಯಲ್ಲಿ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು 2019 ರ ಏಪ್ರಿಲ್‌ನಲ್ಲಿ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಿಸಿದ್ದರು. ಇದಕ್ಕೂ ಮುನ್ನ ರಾಹುಲ್ ಗಾಂಧಿ ಅವರು 2019 ರ ಅಕ್ಟೋಬರ್‌ನಲ್ಲಿ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ಗುರುವಾರ ವಿಚಾರಣೆಗೆ ಒಂದು ವಾರದ ಮೊದಲು, ಸೂರತ್‌ನ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಎ.ಎನ್. ದಾವೆ ಅವರು ರಾಹುಲ್ ಗಾಂಧಿ ಅವರಿಗೆ ಜೂನ್ 24 ರಂದು ಹಾಜರಾಗುವಂತೆ ನಿರ್ದೇಶನ ನೀಡಿದ್ದು, ಪೂರ್ಣೇಶ್ ಮೋದಿ ಅವರು ಸಲ್ಲಿಸಿದ ಮಾನಹಾನಿ ಪ್ರಕರಣದಲ್ಲಿ ತಮ್ಮ ಅಂತಿಮ ಹೇಳಿಕೆಯನ್ನು ದಾಖಲಿಸಲಿದ್ದಾರೆ.
ರಾಹುಲ್ ಗಾಂಧಿ ಇಡೀ ಮೋದಿ ಸಮುದಾಯವನ್ನು ದೂಷಿಸಿದ್ದಾರೆ ಎಂದು ಸೂರತ್-ಪಶ್ಚಿಮ ಶಾಸಕರು ತಮ್ಮ ದೂರಿನಲ್ಲಿ ಆರೋಪಿಸಿದ್ದರು.

ಪ್ರಮುಖ ಸುದ್ದಿ :-   ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆ ಪ್ರಕರಣ : ಸ್ವಾತಿ ಮಲಿವಾಲ್ ಹೊಸ ವೀಡಿಯೊ ಬಿಡುಗಡೆ ಮಾಡಿದ ಎಎಪಿ : ನಿಜವಾಗಿ ನಡೆದದ್ದು ಏನು..?

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement