ಕರಾವಳಿ-ಮಲೆನಾಡಿನಲ್ಲಿ ಇಂದಿನಿಂದ 4 ದಿನ ಭಾರೀ ಮಳೆ:ಹವಾಮಾನ ಇಲಾಖೆ

ಬೆಂಗಳೂರು:ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಇಂದಿನಿಂದ (ಜೂನ್‌ 25ರಿಂದ) ಜೋರಾಗಿ ಮಳೆ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 28ರವರೆಗೂಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿಯೂ ಮಳೆ ಹೆಚ್ಚಾಗಲಿದ್ದು, ನಾಳೆಯಿಂದ (ಜೂನ್‌ 26ರಿಂದ) ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರಿನಲ್ಲಿ ಕೂಡ ಇನ್ನೆರಡು ದಿನ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದಲ್ಲಿ ಬಿಡುವು ನೀಡಿದ್ದ ಮಳೆ ಮತ್ತೆ ಆರಂಭವಾಗುವ ನಿರೀಕ್ಷೆಯಿದೆ.
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ನಾಳೆ ಸಾಧಾರಣ ಮಳೆಯಾಗಲಿದೆ. ಜೂನ್ 27 ಮತ್ತು 28ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರಾವಳಿಯಲ್ಲಿ ಹಾಗೂ ಮಲೆನಾಡಿನಲ್ಲಿ ಇಂದು (ಶುಕ್ರವಾರ) ಸಂಜೆಯ ನಂತರ ಮತ್ತೆ ಮಳೆ ಆರಂಭವಾಗಲಿದೆ ಎಮದು ಹವಾಮಾನ ಇಲಾಖೆ ತಿಳಿಸಿದೆ.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement