ಕರ್ನಾಟಕದಲ್ಲಿ ದೈನಂದಿನ ಕೊರೊನಾ ಸೋಂಕು ಇಳಿಮುಖ

ಬೆಂಗಳೂರು: ಕರ್ನಾಟಕದಲ್ಲಿ ಶುಕ್ರವಾರ ಒಟ್ಟು 3,310 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. 114 ಜನರು ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 28,26,754ಕ್ಕೆ ಏರಿಕೆಯಾಗಿದೆ. 6524 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು 26,84,997 ಜನರು ಗುಣಮುಖರಾಗಿದ್ದಾರೆ. 1,07,195 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 34539 ಜನರು ಮೃತಪಟ್ಟಿದ್ದಾರೆ.
ಬೆಂಗಳೂರಿನಲ್ಲಿ 614 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, 17 ಜನರು ಮೃತಪಟ್ಟಿದ್ದಾರೆ.
ಬೆಂಗಳೂರಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,09,687ಕ್ಕೆ ಏರಿಕೆಯಾಗಿದೆ. ಈ ಪೈಕಿ 11,27,900 ಜನರು ಗುಣಮುಖರಾಗಿದ್ದಾರೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 17 ಜನರು ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ 15554 ಜನರು ಮೃತಪಟ್ಟಿದ್ದಾರೆ. 66,232 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾವಾರು ಸಂಪೂರ್ಣ ಮಾಹಿತಿಯನ್ನು ಪಿಡಿಎಫ್‌ನಲ್ಲಿ ಕೆಳಗೆ ಕೊಡಲಾಗಿದೆ.

25-06-2021 HMB Kannada

5 / 5. 1

ನಿಮ್ಮ ಕಾಮೆಂಟ್ ಬರೆಯಿರಿ

advertisement