ಮುಂದಿನ ವಾರದಿಂದ ಪ್ರವಾಸಿ ತಾಣಗಳು ಮುಕ್ತ: ಸಚಿವ ಯೋಗೇಶ್ವರ

ಬೆಂಗಳೂರು: ಮುಂದಿನ ವಾರದಿಂದ ರಾಜ್ಯದ ಪ್ರವಾಸಿ ತಾಣಗಳನ್ನು ತೆರೆಯಲು ತೀರ್ಮಾನಿಸಲಾಗಿದೆ ಎಂದು ಪ್ರವಾಸೋದ್ಯಮ ಖಾತೆ ಸಚಿವ ಸಿ.ಪಿ.ಯೋಗೇಶ್ವರ್‌ ಹೇಳಿದರು.
‌ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊವಿಡ್​ನಿಂದ ನಲುಗಿರುವ ಪ್ರವಾಸೋದ್ಯಮ ಕ್ಷೇತ್ರಕ್ಕೆ ಪ್ರೋತ್ಸಾಹ ನೀಡಲು ರಾಜ್ಯ ಸರ್ಕಾರ ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದರು.
185 ಕೋಟಿ ರೂ.ಗಳ ಟೆಂಡರ್ ಕರೆದು ಜೋಗ ಜಲಪಾತದ ಅಭಿವೃದ್ಧಿ ಕೆಲಸ ಮಾಡುತ್ತಿದ್ದೇವೆ. ಜೋಗದಲ್ಲಿ 200-300 ಕ್ಯೂಸೆಕ್ಸ್ ನೀರು ಹರಿಸಿ ವರ್ಷಪೂರ್ತಿ ನೀರು ಹರಿಯುವಂತೆ ಮಾಡಲಿದ್ದೇವೆ. ಹೊನ್ನಾವರದಿಂದ ಜಲಮಾರ್ಗದ ಮೂಲಕ ಗೇರುಸೊಪ್ಪೆಗೆ ತರಲು ಸ್ಪೀಡ್ ಬೋಟ್ ವ್ಯವಸ್ಥೆ ಮಾಡಲಿದ್ದೇವೆ. ಕೇವಲ ವಿದ್ಯುತ್‌ಗೆ ಮಾತ್ರ ಜೋಗದ ನೀರು ಬಳಕೆಯಾಗುತ್ತಿತ್ತು. ಮುಂದಿನ ದಿನಗಳಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡುವುದರಿಂದ ಜೋಗದಲ್ಲಿ ಪ್ರವಾಸೋದ್ಯಮ ಚಟುವಟಿಕೆ ಸಹ ಹೆಚ್ಚಾಗಲಿದೆ. ಕೇರಳದಿಂದ ಗೋವಾ ಹೋಗುವ ಪ್ರವಾಸಿಗರನ್ನು ಸೆಳೆಯಲು ಸಹ ಪ್ರಯತ್ನ ನಡೆಯುತ್ತಿದೆ ಎಂದರು.
ಬಿಜೆಪಿಯಲ್ಲಿ ಮೂಡಿರುವ ಗೊಂದಲ ಕುರಿತು ಮಾತನಾಡಿದ ಅವರು ಪಕ್ಷಕ್ಕೆ ಕುಂದು ಬರಬಾರದೆಂದು ನಮ್ಮ ನೋವುಗಳನ್ನು ನಾಲ್ಕು ಗೋಡೆ ಮಧ್ಯೆ ಹೇಳಿದ್ದೇವೆ. ಹೈಕಮಾಂಡ್‌ ನಮ್ಮ ಎಲ್ಲ ಸಮಸ್ಯೆ ಸರಿಪಡಿಸುವ ವಿಶ್ವಾಸವಿದೆ. ನನಗೆ ವೈಯಕ್ತಿಕವಾಗಿ ಯಾವ ಸಮಸ್ಯೆಯೂ ಇಲ್ಲ. ಮುಖ್ಯಮಂತ್ರಿ ಬಗ್ಗೆಯೂ ಅಪಾರ ಗೌರವವಿದೆ. ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಮಾಡಬೇಕು. ಹೊಂದಾಣಿಕೆ ರಾಜಕಾರಣ ಬೇಡವೆಂಬುದಷ್ಟೇ ನಮ್ಮ ಸಮಸ್ಯೆ. ಹಿರಿಯರು ಎಲ್ಲ ತೀರ್ಮಾನ ಮಾಡುತ್ತೇವೆಂದು ಹೇಳಿದ್ದಾರೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಬೆಳಗಾವಿ; ಟಿಕೆಟ್​ ತೋರಿಸು ಎಂದಿದ್ದಕ್ಕೆ ರೈಲಿನಲ್ಲಿ ಟಿಸಿ ಸೇರಿ ಐವರ ಮೇಲೆ ಮುಸುಕುಧಾರಿಯಿಂದ ಹಲ್ಲೆ, ಓರ್ವ ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement